Tuesday, January 27, 2026

ತೀವ್ರ ಕುತೂಹಲ ಕೆರಳಿಸಿದ್ದ ಮಾಣಿ ಗ್ರಾ.ಪಂ.ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ತೀವ್ರ ಕುತೂಹಲ ಕೆರಳಿಸಿದ್ದ ಮಾಣಿ ಗ್ರಾಮಪಂಚಾಯತ್ ನ 10 ಸ್ಥಾನಗಳ ಪೈಕಿ ಕಾಂಗ್ರೇಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ 8 ಮಂದಿ ಅಭ್ಯರ್ಥಿ ಗಳು ಜಯಗಳಿಸುವ ಮೂಲಕ ಕಾಂಗ್ರೇಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.
ಇಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಸ್ವತಃ ಚುನಾವಣೆಗೆ ಸ್ಪರ್ಧಿಸಿ ವಿಜಯ ಸಾಧಿಸಿದ್ದು, ಉಳಿದಂತೆ ಕಾಂಗ್ರೇಸ್ ಬೆಂಬಲಿತರಾಗಿ‌ ಸ್ಪರ್ಧಿಸಿದ್ದ ಇಬ್ರಾಹಿಂ ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸೀತಾ, ರಮಣಿ, ಬಾಲಕೃಷ್ಣ ಆಳ್ವ, ಪ್ರೀತಿ ಪಿರೇರಾ, ಸುಜಾತ ಗೆಲುವು ಸಾಧಿಸಿದ್ದು, ಬಿಜೆಪಿ ಬೆಂಬಲಿತ ಪೈಕಿ ನಾರಾಯಣ ಶೆಟ್ಟಿ ಕೊಂಬಿಲ ಹಾಗೂ ಮಿತ್ರಾಕ್ಷಿ ಗೆಲುವು ಸಾಧಿಸಿದ್ದಾರೆ. ಕಳೆದ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೇಸ್ ಹಾಗೂ ಬಿಜೆಪಿ‌ ತಲಾ 5 ಸ್ಥಾನಗಳನ್ನು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಅದೃಷ್ಟಚೀಟಿಯ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿತ್ತು. ಈ ಬಾರಿ ಕಾಂಗ್ರೇಸ್ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...