Wednesday, July 9, 2025

ವಿದ್ಯುತ್ ಶಾಕ್ ಗೆ ರತ್ನವರ್ಮ ಜೈನ್ ಬಲಿ

ಕಾರ್ಕಳ: ಕಾರ್ಕಳ ಸಮೀಪದ ಮುಂಡ್ಲಿಯ ತಂಪು ಪಾನೀಯ ಫ್ಯಾಕ್ಟರಿಯೊಂದರಲ್ಲಿ ವಿದ್ಯುತ್ ಆಘಾತದಿಂದ ಕಂಬಳ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದ ಕಂಬಳ ಪ್ರೇಮಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಸಾಂತ್ರಬೆಟ್ಟು ರತ್ನ ವರ್ಮ ಜೈನ್(48) ವಿದ್ಯುತ್ ಆಘಾತದಿಂದ ಮೃತಪಟ್ಟ ವ್ಯಕ್ತಿ.
ಕಾರ್ಕಳದ ತಂಪು ಪಾನೀಯ ಯೊಂದರಲ್ಲಿ ಜನರೇಟರ್ ಆಫ್‌ ಮಾಡುವ ವೇಳೆ ಇವರ ಮೈಮೇಲೆ ವಿದ್ಯುತ್ ಹರಿದು ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂದು ವರ ಪ್ರಾಥಮಿಕ ವರದಿ ತಿಳಿಸಿದೆ.
ರತ್ನವರ್ಮ ಜೈನ್ ಅವರು ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ದ ಕಂಬಳ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಲ್ಲದೆ ಹಲವು ಸಾಧನೆಗಳನ್ನು ಮಾಡಿ ಗುರುತಿಸಲ್ಪಟ್ಟಿದ್ದರು.
ಇವರ ಅಕಾಲಿಕ ಮರಣ ಕಂಬಳ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...