Tuesday, January 27, 2026

ಪ್ರತಿಷ್ಠೆ ಬಿಟ್ಟು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ- ಯು.ಟಿ. ಖಾದರ್.

ಇರಾ: ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸರಕಾರವು ಬಹಳಷ್ಟು ವೆಚ್ಚವನ್ನು ಮಾಡುತ್ತಿದೆ. ಪೋಷಕರು ಪ್ರತಿಷ್ಠೆ ಬಿಟ್ಟು ಮಕ್ಕಳ ಭವಷ್ಯಕ್ಕಾಗಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರಕಾರಿ ಶಾಲೆಗಳಿಗೆ ಸೇರಿಸುವಂತಾಗಬೇಕು ಎಂದು ಮಂಗಳೂರು ವಿಧಾನಸಬಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರು ಹೇಳಿದರು.
ಬಂಟ್ವಾಳ ತಾಲೂಕು ಇರಾ ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ಬಾಳೆಪುಣಿಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಎಂ.ಆರ್.ಪಿ.ಎಲ್ ಸಹಕಾರದಿಂದ ನೂತನವಾಗಿ ನಿರ್ಮಿಸಲಾದ ಮೂರು ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿ.ಪಂ. ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಇ.ಸಿ.ಒ. ಸುಶೀಲ, ಬಾಳೆಪುಣಿ (ಮುದರ್ರಿಸ್ ನ ಅಲ್ ಹಾಜಿ ಮುಹಮ್ಮದಲಿ ಫೈಝಿ, ಮಂಗಳೂರು ನ್ಯಾಯವಾದಿ ಯಶವಂತ ಮರೋಳಿ, ಇರಾ ಗ್ರಾ.ಪಂ. ಸದಸ್ಯರಾದ ಎಂ.ಬಿ.ಉಮ್ಮರ್, ಮೊಯ್ದೀನ್ ಮೂಲೆ, ತಿಬಿಯಾನ್ ಸ್ಕೂಲ್ ನ ಅಧ್ಯಕ್ಷ ಮೊಯ್ದೀನ್ ಹಾಜಿ ಬದಿಮಾಲೆ, ಇರಾ ಬಾಳೆ ಪುಣಿಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ  ಅಝೀಝ್ ಬಡದಲ, ಎಸ್ ಡಿ.ಎಂ.ಸಿ. ಅಧ್ಯಕ್ಷ ಹಸೈನಾರ್ ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ಶಾಲೆಯ ಪೋಷಕರಾಗಿದ್ದ, ಬಿ.ಜೆ.ಎಂ.ಬಾಳೆಪುಣಿ ಗೌರವಾಧ್ಯಕ್ಷ  ಕುಂಞಿಹಾಜಿ ಬಾಳೆಪುಣಿ ಅವರನ್ನು  ಸನ್ಮಾನಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಸವಿತಾ ಸ್ವಾಗತಿಸಿ, ಸಹಶಿಕ್ಷಕಿ ಅನುಸೂಯ ವಂದಿಸಿದರು. ಶೋಭಿತಾ ಹಾಗೂ ವಿಜಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...