Thursday, February 13, 2025

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರು: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾನ್ಯ ಸಚಿವರಲ್ಲಿ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...