Wednesday, February 12, 2025

ದ್ವಿತೀಯ ಪಿಯುಸಿ, ಎಸ್ಎಸ್ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮಾರ್ಚ್​ 1 ರಿಂದ ಹಾಗೂ ಎಸ್​​ಎಸ್​ಎಲ್​ಸಿ ಪರೀಕ್ಷೆ ಮಾರ್ಚ್​ 25 ರಿಂದ ನಡೆಯಲಿವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ದ್ವಿತೀಯ ಪಿಯು ಪರೀಕ್ಷೆ ಮಾರ್ಚ್​ 1 ರಿಂದ ಮಾರ್ಚ್​​ 22ರವರೆಗೆ ನಡೆಯಲಿವೆ. ಈ ಬಾರಿ ಒಟ್ಟು 6,98,624 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದು 1,124 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪಿಯುಸಿ ಪರೀಕ್ಷೆ ಮುಗಿದ 2 ದಿನ ಬಿಟ್ಟು ಎಸ್​​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗಲಿವೆ.

ಎಸ್​​ಎಸ್​ಎಲ್​ಸಿ ಪರೀಕ್ಷೆ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ನಡೆಯಲಿದೆ. ಈ ಬಾರಿ 8,96,271 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 2,747 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇನ್ನು 10ನೇ ತರಗತಿ ವಿದ್ಯಾರ್ಥಿಗಳು ಎಲ್ಲ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು 3ರಲ್ಲಿ ಯಾವುದಾದರೂ ಒಂದು ಪರೀಕ್ಷೆಗೆ ಹಾಜರಾಗಬೇಕು. 3 ಎಕ್ಸಾಂನಲ್ಲಿ ಮೊದಲು ಅಥವಾ 2ನೇ ಇದರಲ್ಲಿ ಯಾವ ಪರೀಕ್ಷೆಯನ್ನು ಬೇಕಿದ್ದರೂ ಆಯ್ಕೆ ಮಾಡಬಹುದು. ಈ 3ರಲ್ಲಿ ವಿದ್ಯಾರ್ಥಿಯ ಹೆಚ್ಚು ಮಾರ್ಕ್ಸ್ ಮಾತ್ರ ಪರಿಗಣನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನು SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ ಇರುತ್ತದೆ. ಉಳಿದ 20 ಅಂಕಗಳು ಅಂತರಿಕ ಪ್ರಾಯೋಗಿಕ ಪರೀಕ್ಷೆ ಒಳಗೊಂಡು 100 ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ. ಆಯಾ ಪರೀಕ್ಷೆಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ತುರ್ತಾಗಿ ಅಗತ್ಯವಿದ್ದಲ್ಲಿ ಡಿಜಿಲಾಕರ್​ ಆ್ಯಪ್​ನಿಂದ ಪಡೆಯಬಹುದು ಎಂದರು.

ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸಚಿವರು, ಕೋರ್ಟ್ ನಿರ್ದೇಶನದಂತೆ ಡ್ರೆಸ್ ಕೋಡ್ ಪಾಲೋ ಮಾಡಬೇಕಾಗುತ್ತದೆ ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ

  • 25-03-2024 : ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ಪ್ರಥಮ ಭಾಷೆ).
  • 27-03-2024 : ಸಮಾಜ ವಿಜ್ಞಾನ
  • 30-03-2024 : ವಿಜ್ಞಾನ
  • 02-04-2024 : ಗಣಿತ
  • 03-04-2024 :ಅರ್ಥಶಾಸ್ತ್ರ (ಕೋರ್ ಸಬ್ಜೆಕ್ಟ್‌)
  • 04-04-2024 : ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ).
  • 06-04-2024 : ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)

2nd PUC ಪರೀಕ್ಷೆ-1 ಅಂತಿಮ ವೇಳಾಪಟ್ಟಿ (ಪರೀಕ್ಷೆ ವಿಷಯಗಳು ಹಾಗೂ ಪರೀಕ್ಷೆ ದಿನಾಂಕ)

  • 01-03-2024 : ಕನ್ನಡ, ಅರೇಬಿಕ್
  • 04-03-2024 : ಗಣಿತ, ಶಿಕ್ಷಣಶಾಸ್ತ್ರ
  • 05-03-2024 : ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • 06-03-2024 : ಮಾಹಿತಿ ತಂತ್ರಜ್ಞಾನ, ಹೆಲ್ತ್‌ಕೇರ್, ಬ್ಯೂಟಿ ಅಂಡ್ವೆಲ್‌ನೆಸ್‌ , ಆಟೋಮೊಬೈಲ್, ರೀಟೈಲ್
  • 07-03-2024 : ಇತಿಹಾಸ / ಭೌತಶಾಸ್ತ್ರ
  • 09-03-2024 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • 11-03-2024 : ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • 13-03-2024 : ಇಂಗ್ಲಿಷ್
  • 15-03-2024 : ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
  • 16-03-2024 : ಅರ್ಥಶಾಸ್ತ್ರ
  • 18-03-2024 : ಭೂಗೋಳಶಾಸ್ತ್ರ, ಜೀವಶಾಸ್ತ್ರ
  • 20-03-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
  • 21-03-2024 : ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್
  • 22-03-2024 : ಹಿಂದಿ

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...