Thursday, June 26, 2025

ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಿಬಿಎಸ್​ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಹಾಗೂ 12ನೇ ತರಗತಿ ಪರೀಕ್ಷೆ ದಿನಾಂಕವನ್ನು  ಮುಂದೂಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಸಚಿವಾಲಯ, 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಮತ್ತು 12 ನೇ ತರಗತಿಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಂಡಳಿಯು ಅಭಿವೃದ್ಧಿಪಡಿಸಬೇಕಾದ ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ 10 ನೇ ತರಗತಿಯ ಫಲಿತಾಂಶ ನಿಗದಿಪಡಿಸುತ್ತದೆ. 12 ನೇ ತರಗತಿ ಪರೀಕ್ಷೆಗಳು ನಂತರ ನಡೆಯಲಿವೆ. ಜೂನ್ 1 ರಂದು ಪರಿಸ್ಥಿತಿಯ ಅವಲೋಕನ ನಡೆಸಲಾಗುವುದು ಎಂದು ತಿಳಿಸಿದೆ.

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ನಡುವೆ ಸಿಬಿಎಸ್​ಇ ಪರೀಕ್ಷೆ ನಡೆಸುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ 2 ಲಕ್ಷಕ್ಕೂ ಹೆಚ್ಚು ಪಿಟಿಷನ್ ಸಲ್ಲಿಸಲಾಗಿತ್ತು. ಈ ನಿಟ್ಟಿನಲ್ಲಿ ಸಿಬಿಎಸ್​ಇ ಬೋರ್ಡ್​ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ್ದರು. ಈ ಬೆನ್ನಲ್ಲೇ ಇಲಾಖೆಯು ಈ ಆದೇಶವನ್ನು ಹೊರಡಿಸಿದೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...