Monday, January 26, 2026

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಕೆಲಸದ ಅವಧಿ ಸಮಯ ಬದಲಾವಣೆ: ಪದ್ಮನಾಭ ಕೊಟ್ಟಾರಿ

ಬಂಟ್ವಾಳ: ಕೊರೊನೊ ಜನತಾಕರ್ಪ್ಯೂ ನ ಹಿನ್ನೆಲೆಯಲ್ಲಿ ಜನರಿಗೆ ಸಹಕಾರ ನೀಡುವ ಉದ್ದೇಶದಿಂದ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜನರ ಅನುಕೂಲದ ದೃಷ್ಟಿಯಿಂದ ಬೆಳಿಗ್ಗೆ ಗಂಟೆ 8 ರಿಂದ ಮಧ್ಯಾಹ್ನ 12 ಗಂಟೆಯವರಗೆ ತೆರೆದಿರುತ್ತದೆ. ಈ ಸಮಯದಲ್ಲಿ ಸಂಘದ ಕಚೇರಿಯ ಅಧೀನದಲ್ಲಿರುವ ರೇಷನ್ ಅಂಗಡಿಗಳು ಕೂಡಾ ತೆರೆದಿದ್ದು, ಜನರು ಈ ಸಮಯದಲ್ಲಿ ರೇಷನ್ ಪಡೆಯಲು ಅವರು ಕೋರಿದ್ದಾರೆ.
ಕಲ್ಲಡ್ಕದಲ್ಲಿ ರೈತರ ಸೇವಾ ಸಹಕಾರಿ ಸಂಘದ ಮಾತೃಸಂಸ್ಥೆಯಿದ್ದು, ಉಳಿದಂತೆ ವೀರಕಂಭ, ಬೋಳಂತೂರು ಹಾಗೂ ಅಮ್ಟೂರು ಈ ಮೂರು ಕಡೆಗಳಲ್ಲಿಯೂ ಒಂದೇ ರೀತಿಯ ಸಮಯ ನಿಗದಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...