Friday, January 30, 2026

ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕೆಂದು ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಕೊರೊನಾ ವೈರಸ್ ಕಾರಣದಿಂದ ಅಂತಿಮ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಯುಜಿಸಿ ನಿರ್ದೇಶನದಂತೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ನಡೆಸದೇ ಪಾಸ್ ಮಾಡುವಂತಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ನೇತೃತ್ವದ ತ್ರಿಸದಸ್ಯ ಪೀಠ ಈ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿದೆ.
ಈ ತೀರ್ಪಿನಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನಿಟ್ಟುಸಿರು ಬಿಡುವಂತಾಗಿದ್ದು, ಪದವಿ ಪರೀಕ್ಷೆ ಆಯೋಜನೆಗೆ ಸಂಬಂಧಿಸಿದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.
ದೇಶದೆಲ್ಲೆಡೆ ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದ ಪರೀಕ್ಷೆಯನ್ನು ನಡೆಸುವಂತೆ ಯುಜಿಸಿ ಜುಲೈ 6ರಂದು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿತ್ತು. ಇದರ ವಿರುದ್ಧ ಕೆಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಪರೀಕ್ಷೆ ನಡೆಸಲೇ ಬೇಕೆಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...