Thursday, February 13, 2025

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

 

ಬೆಂಗಳೂರು:    ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯವಾಗಿದೆ. ಈ ಸಂಸ್ಥೆಗಳು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ ಹಾಗೂ ಸುಸ್ತಿ ಸಾಲಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಲ್ಲಿಸದಿದ್ದರೆ 6 ತಿಂಗಳ ಕಾರಗೃಹವಾಸ ಅಥವಾ 10 ಸಾವರಿರೂ ವರೆಗೆ ದಂಡ ಅಥವಾ ಎರಡೂ ಶಿಕ್ಷೆಗೆ ಗುರಿಯಾಗುತ್ತಾರೆ.
ವಿವಾದಗಳನ್ನು ಇತ್ಯರ್ಥಗಳನ್ನು ಒಂಬುಡ್ಸ್‍ಮನ್‍ಗಳನ್ನು ಸರ್ಕಾರ ಅಧಿಸೂಚನೆ ಮೂಲಕ ನೇಮಕ ಮಾಡುವ ಅಧಿಕಾರ ಹೊಂದಿರುತ್ತದೆ.

ಜಾಮೀನು ರಹಿತ ಪ್ರಕರಣಗಳು  : ಡಾ. ಶಾಲಿನಿ ರಜನೀಶ್
ಬಲವಂತದ ವಸೂಲಾತಿಗಳನ್ನು ಕೈಗೊಳ್ಳುವ ವ್ಯಕ್ತಿಯು ವಿಚಾರಣೆಗೆ ಒಳಪಡುತ್ತಾನೆ, ಹತ್ತು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಗೃಹವಾಸ ಶಿಕ್ಷೆ ಹಾಗೂ 5 ಲಕ್ಷ ರೂ ವರೆಗೆ ವಿಧಿಸಬಹುದಾದ ಜುಲ್ಮಾನೆಗೆ ಒಳಪಡುತ್ತಾನೆ. ಈ ಅಪರಾಧಗಳು ಸಂಜ್ಞೆಯ (ಕಾಗ್ನಿಜಿಬಲ್) ಹಾಗೂ ಜಾಮೀನು ರಹಿತ (ನಾನ್ ಬೇಲೆಬಲ್) ಪ್ರಕರಣಗಳಾಗಿರುತ್ತವೆ. ಯಾವುದೇ ಪೊಲೀಸ್ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲು ನಿರಾಕರಿಸಬಾರದು. ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್‍ಪಿ) ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯು ಸ್ವತಃ (ಸುಮೊಟೊ) ಪ್ರಕರಣ ದಾಖಲಿಸಬಹುದು. ಸರ್ಕಾರವು ಈ ಅಧ್ಯಾದೇಶದ ಅನುಷ್ಠಾನಕ್ಕೆ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ. ಈ ಆದೇಶದಿಂದ ಆರ್.ಬಿ.ಐ ಮತ್ತು ಕೇಂದ್ರ / ರಾಜ್ಯ ಸರ್ಕಾರಗಳಿಂದ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚಿಸಲು ಹಾಗೂ ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ನೀಡುತ್ತದೆ.
*ಡಾ. ಶಾಲಿನಿ ರಜನೀಶ್*,
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು

More from the blog

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶ: ಬಂಟ್ವಾಳ ತಾಲೂಕು ಸಮಿತಿ ಪ್ರಮುಖರ ಸಭೆ

  ಬಂಟ್ವಾಳ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗೀ ಸಹಿತ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ಆಮಂತ್ರಣ ಪತ್ರಿಕೆ...

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...