Tuesday, February 3, 2026

ಕೋವಿಡ್ ನಿಯಮದ ಉಲ್ಲಂಘನೆ: ಫರಂಗಿಪೇಟೆ ಮೀನು ವ್ಯಾಪಾರಸ್ಥರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಮೀನು ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದ ಮೀನು ವ್ಯಾಪಾರಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು ಬಾಗಿಲು ತೆರೆದಿದ್ದ ಅಗತ್ಯ ವಸ್ತುಗಳು ಅಲ್ಲದ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಕಾರ್ಯಾಚರಣೆ ವೇಳೆ ಫಂರಗಿಪೆಟೆ ಮೀನು ಮಾರುಕಟ್ಟೆಯಲ್ಲಿ ಗ್ರಾಹಕರ ನಡುವೆ ಯಾವುದೇ ಸಾಮಾಜಿಕ ಅಂತರ ಇಲ್ಲದೆ ವ್ಯಾಪಾರ ನಡೆಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಮೀನು ಮಾರುಕಟ್ಟೆಯ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಜಾರಿ ಮಾಡಿದ್ದು ಅದರಂತೆ ಬಹುತೇಕ ಅಂಗಡಿಗಳು ಶುಕ್ರವಾರ ಬಂದ್ ಆಗಿವೆ. ಮೀನು ವ್ಯಾಪಾರವು ದಿನಬಳಕೆಯ ಅಗತ್ಯ ವಸ್ತುಗಳ ಅಡಿಯಲ್ಲಿ ಬರುವುದರಿಂದ ಮೀನು ಮಾರಾಟಕ್ಕೆ ಸರಕಾರ ಅನುಮತಿ ನೀಡಿದೆ. ಆದರೆ ಕೋವಿಡ್ ನಿಯಂತ್ರಣದ ಎಲ್ಲಾ ಮಾರ್ಗಸೂಚಿಯನ್ನು ಪಾಲಿಸಿ ವ್ಯಾಪಾರ ನಡೆಸುವಂತೆ ಎಚ್ಚರಿಕೆ ನೀಡಿದೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...