Friday, January 30, 2026

ಬ್ರೇಕಿಂಗ್ ನ್ಯೂಸ್… ಬಿಸಿರೋಡ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿಯಲ್ಲಿ ಬೆಂಕಿ ಬಿಸಿರೋಡು -ನಂದಾವರ ರಸ್ತೆ ತಾತ್ಕಾಲಿಕ ಬಂದ್

ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು.

ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.

‌‌ ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು.

ಇನ್ನು  ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.

ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸ ಪಟ್ಟರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...