Wednesday, January 28, 2026

ಬಿ.ಸಿ.ರೋಡಿನ ಕ್ಯಾಂಟೀನ್ ನಲ್ಲಿ ಅಗ್ನಿ ಆಕಸ್ಮಿಕ

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕ್ಯಾಂಟೀನ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸೊತ್ತುಗಳು ಸಂಪೂರ್ಣ ಅಗ್ನಿಗಾಹುತಿಯಾಗಿದೆ.

ಇಲ್ಲಿನ ಬಸ್ ನಿಲ್ದಾಣ ಬಳಿಯ ಸಣ್ಣ ಕ್ಯಾಂಟೀನ್ ಒಂದರಲ್ಲಿ ರಾತ್ರಿ ಸುಮಾರು 7.30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದನ್ನು ಹತ್ತಿರದ ಮನೆಯವರು ನೋಡಿ ಆತಂಕದಿಂದ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೆ ಸಾರ್ವಜನಿಕರು ಬೆಂಕಿ ನಂದಿಸಿದ್ದು, ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದೆ.

ಕಲ್ಲಡ್ಕದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಅಗ್ನಿಶಾಮಕದಳ ಆಗಮಿಸುವುದು ತಡವಾದರೂ ಬಳಿಕ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಅಪಾರ ಪ್ರಮಾಣದ ಸೊತ್ತುಗಳು ನಾಶವಾಗಿದೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...