ಬಂಟ್ವಾಳ: ಕೋಳಿ ಪೀಡ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಬೆಂಕಿ ತಗುಲಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ರಿಬ್ಬರಿಗೂ ಗಾಯಗಳಾಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಈ ಘಟನೆ ಸಂಭವಿಸಿದೆ.




ಕಂದೂರಿನಿಂದ ಪೀಡ್ ಪ್ರಾಡಕ್ಟ್ ಕಂಪೆನಿಯಿಂದ ಮಿನಿ ಲಾರಿ ಪೀಡ್ ತುಂಬಿಸಿಕೊಂಡು ಹೋಗುವ ವೇಳೆ ಮಾರ್ನಬೈಲು ಎಂಬಲ್ಲಿ ಘಟನೆ ಸಂಭವಿಸಿದೆ.
ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.
ಲಾರಿಗೆ ಬೆಂಕಿ ತಗುಲಿ ಬಳಿಕ ಅಪಘಾತ ಸಂಭವಿಸಿದೆಯಾ ಅಥವಾ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಅನಂತರ ಮನೆಯೊಂದರ ಕಾಂಪೌಂಡ್ ಗೆ ಡಿಕ್ಕಿಯಾದ ಬಳಿಕ ಲಾರಿಗೆ ಬೆಂಕಿ ಹಚ್ಚಿಕೊಂಡಿದೆಯಾ ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಾಗಿದೆ.
ಲಾರಿಗೆ ಬೆಂಕಿ ಹಚ್ಚಿಕೊಂಡಿದ್ದನದನ್ನು ಬಂಟ್ವಾಳ ಅಗ್ನಿ ಶಾಮಕ ದಳದವರು ನಂದಿಸಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಅವರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ.

