Thursday, January 29, 2026

ಅಕ್ರಮ ಮರ ಸಾಗಾಟ: ಆರೋಪಿ ಸಹಿತ ಲಕ್ಷಾಂತರ ರೂ ಮೌಲ್ಯದ ಸೊತ್ತು ವಶ

ಮಂಗಳೂರು : ಲಕ್ಷಾಂತರ ರೂ ಮೌಲ್ಯದ ಮರ ಸಾಗಾಣಿಕೆ ವಾಹನ ಸಹಿತ ಆರೋಪಿಯನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಾಪು ತಾಲೂಕ್ ಸುಭಾಶನಗರ ಮೂಡಬೇತ್ತು ಗ್ರಾಮದ ಮಹಮದ್ ಹಾರೂನ್ ಬಂಧಿತ ಆರೋಪಿ.

ಅಂದಾಜು 2.5ಲಕ್ಷ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೇ. 25 ರಂದು ಮುಂಜಾನೆ ಮಂಗಳೂರು ತಾಲೂಕು ಸುರತ್ಕಲ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೬೬ ರ ಮುಕ್ಕ ಎಂಬಲ್ಲಿಅಕ್ರಮವಾಗಿ ರಹದಾರಿ ರಹಿತ ಮರದ ದಿಮ್ಮಿಗಳನ್ನು ಸಾಗಾಟ ಮಾಡುವ ಮಾಹಿತಿ ಮೇರೆ ಗೆ ಮಂಗಳೂರು ವಲಯ ಅರಣ್ಯಾಧಕಾರಿ ಯಾದ ಶೀರ್ಧರ್ ಪಿ ಅವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗಳಾದ ಕೃಷ್ಣ , ವಿನಯ್ ಕುಮಾರ್, ಮೋಹನ್, ಸೋಮನ ಗೌಡ ಪಾಟೀಲ್ ಹಾಗೂ ಚಾಲಕ ಸುನಿಲ್ ಬಿ ಸಿ ಪತ್ತೆ ಹಚ್ಚಿ ಕೇಸು ದಾಖಲಿಸಿರು ತ್ತಾರೆ..ಆರೋಪಿ ಚಾಲಕನಾದ ಕಾಪು ತಾಲೂಕ್ ಸುಭಾಶನಗರ ಮೂಡಬೇತ್ತು ಗ್ರಾಮದ ಮಹಮದ್ ಹಾರೂನ್ ಮೇಲೆ ಪ್ರಕರಣ ದಾಖಲಿಸಿಕೊಂಡು ಸೊತ್ತು ಮತ್ತು ವಾಹನವನ್ನು ಸರ್ಕಾರದ ಪರವಾಗಿ ಅಮಾನತು ಮಾಡಿ ಕೊಳ್ಳಲಾಯಿತು.

ಮುಂದಿನ ತನಿಖೆಯನ್ನು ಡಿಸಿಎಫ್ ಕರಿಕಳನ್ ಮತ್ತು ಎಸಿಎಫ್ ಸುಬ್ರಮಣ್ಯ ರಾವ್ ಇವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ ಶ್ರೀಧರ್ ಪೀ ನೆಡೆಸುತಿದ್ದಾರೆ..

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...