Friday, February 6, 2026

ರೈತರ ಜಮೀನಿಗೆ ಅಕ್ರಮವಾಗಿ ನುಗ್ಗಿ ಸರ್ವೇ ಮಾಡಲು ಯತ್ನಿಸಿದರೆ ಹುಷಾರ್! ರೈತ ಸಂಘದ ಅಧ್ಯಕ್ಷ ಓಸ್ವಾಲ್ಡ್ ಫರ್ನಾಂಡೀಸ್ ಎಚ್ಚರಿಕೆ

ಬಂಟ್ವಾಳ: ರೈತರ ಜಮೀನುಗಳಿಗೆ ಅಕ್ರಮವಾಗಿ ನುಗ್ಗಿ ಸರ್ವೇಗೆ ಮುಂದಾಗುತ್ತಿರುವ ವ್ಯಕ್ತಿಗಳನ್ನು ನಿರ್ಧಾಕ್ಷಿಣ್ಯವಾಗಿ ತಡೆಯಬೇಕು. ಸೂಕ್ತ ಮಾಹಿತಿ ಇಲ್ಲದೆ ಖಾಸಗೀ ಜಮೀನಿಗೆ ನುಗ್ಗಿದರೆ ಪ್ರತಿಭಟನೆ ನಡೆಸುವ ಎಂದು ದಕ್ಷಿಣ ಕನ್ನಡ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಓಸ್ವಾಲ್ಡ್ ಫರ್ನಾಂಡಿಸ್ ಹೇಳಿದರು.

ಅವರು ಸೊರ್ನಾಡು ಮಿಲ್ಕ್ ಡೈರಿ ಸಭಾಂಗಣದಲ್ಲಿ ಬಂಟ್ವಾಳ ಭಾಗದಲ್ಲಿ 400ಕೆ ವಿ ಉಡುಪಿ ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗದಿಂದ ಜಮೀನು ಕಳೆದುಕೊಳ್ಳುವ ಸಂತ್ರಸ್ತ ರೈತರ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಖಾಸಗೀ ಜಮೀನುಗಳಿಗೆ ಯಾರಿಗೂ ಪ್ರವೇಶವಿಲ್ಲ ಎಂದು ಎಚ್ಚರಿಕೆ ನೀಡಿದರೂ ರೈತರು ತೋಟದಲ್ಲಿ ಇಲ್ಲದ ಸಮಯ ಕಳ್ಳರಂತೆ ತೋಟಗಳಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಮಾಹಿತಿ ನೀಡುವ ತನಕ ಯಾರೇ ಬಂದರೂ ಅವರನ್ನು ಓಡಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಎಲ್ಲಾ ಪಂಚಾಯಿತಿಗಳಿಗೆ ನಿರಪೇಕ್ಷಣ ಪತ್ರ ನೀಡದಂತೆ ರೈತರಿಂದ ಪತ್ರ ನೀಡುವುದು, ಜಿಲ್ಲಾ ದಂಡಾಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಯೋಜನೆ ಕೈಬಿಡುವಂತೆ ರೈತರು ವೈಯಕ್ತಿಕವಾಗಿ ಪತ್ರ ಬರೆಯುವ ಬಗ್ಗೆ ನಿರ್ಣಯಕೈಗೊಳ್ಳಲಾಯಿತು.ಈ ಸಭೆಯಲ್ಲಿ ರೈತ ಹೋರಾಟ ಸಮಿತಿಯ ಸಂಯೋಜಕರಾದ ಶ್ರೀಮತಿ ಕೊನ್ಸೆಪ್ಟ ಡೆಸಾ ಮುಂದಿನ ಹೋರಾಟದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅರಳ,ಪಂಜಿಕಲ್ಲು, ಬಿ ಮೂಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಂತ್ರಸ್ತ ರೈತರು ಉಪಸ್ಥಿತರಿದ್ದರು
ರೈತ ಹೋರಾಟ ಸಮಿತಿಯ ಅಧ್ಯಕ್ಷರಾದ ರೊಯ್ ಕಾರ್ಲೊ ಸ್ವಾಗತಿಸಿದರು.ಕಾರ್ಯದರ್ಶಿಯಾದ ಶ್ರೀಮತಿ ಬೆನೆಡಿಕ್ಟ ಕಾರ್ಲೊ ವಂದಿಸಿದರು

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...