Thursday, June 26, 2025

ರಾಷ್ಟ್ರೀಯ ಹಬ್ಬಗಳನ್ನು ಗಂಭೀರವಾಗಿ ಆಚರಿಸುವ ಪರಿಕಲ್ಪನೆ ಎಲ್ಲೆಡೆ ಮೊಳಗಬೇಕು: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ರಾಷ್ಟ್ರೀಯ ಹಬ್ಬಗಳನ್ನು ಗಂಭೀರವಾಗಿ ಆಚರಿಸುವ ಪರಿಕಲ್ಪನೆ ಎಲ್ಲೆಡೆ ಮೊಳಗಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.


ಅವರು ರವಿವಾರ ಬಿ.ಸಿ.ರೋಡು ಮಿನಿ ವಿಧಾನಸೌಧ ವಠಾರದಲ್ಲಿ ಜರಗಿದ ಬಂಟ್ವಾಳ ತಾಲೂಕು ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ರಶ್ಮಿ ಎಸ್.ಆರ್. ಗಣರಾಜ್ಯೋತ್ಸವ ಸಂದೇಶ ನೀಡಿದರು.
ನಾರ್ಶ ಸರಕಾರಿ ಪ್ರೌಢಶಾಲಾ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ ಪ್ರಧಾನ ಭಾಷಣ ಮಾಡಿದರು.
ವೇದಿಕೆಯಲ್ಲಿ ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಡಿವೈಎಸ್ಪಿ ವಲೆಂಟೈನ್ ಡಿಸೋಜ, ಬಿ.ಇ.ಒ.ಜ್ಞಾನೇಶ್, ಸ್ವಾತಂತ್ರ್ಯ ಹೋರಾಟಗಾರ ಶ್ಯಾಮರಾವ್ ಆಚಾರ್ಯ, ಉಪಸ್ಥಿತರಿದ್ದರು.
ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಶ್ಯಾಮರಾವ್ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...