ಬಂಟ್ವಾಳ: ಗಾಂಧೀಜಿ ಜನ್ಮದಿನಾಚರಣೆ ಪ್ರಯುಕ್ತ ತಹಶೀಲ್ದಾರ್ ರಶ್ಮಿ. ಎಸ್.ಆರ್ ನೇತೃತ್ವದಲ್ಲಿ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಸ್ವಚ್ಚತಾ ಕಾರ್ಯ.

ಗಾಂಧೀಜಿ ಜನ್ಮದಿನಾಚರಣೆ ಪ್ರಯುಕ್ತ ಇಂದು ಬೆಳಗ್ಗೆ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಸ್ವತಹ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳೊಂದಿಗೆ ಕೈಯಲ್ಲಿ ಪೊರಕೆ ಹಿಡಿದು ಗುಡಿಸಲು ಕೈ ಜೋಡಿಸಿದರು.



ಕಂದಾಯ ಇಲಾಖೆಯ ಪ್ರತಿಯೊಬ್ಬರ ಸಹಕಾರದಿಂದ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಿದೆ ಎಂದರು. ನಂತರ
ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಗಾಂಧಿ ಜಯಂತಿ ಆಚರಣಣೆಯನ್ನು ದೀಪ ಬೆಳಗಿಸಿ ಮಾತನಾಡಿದ ರಶ್ಮಿ. ಎಸ್. ಆರ್
ನಮ್ಮ ಪ್ರತಿ ಹೆಜ್ಜೆಯಲ್ಲಿ ಗಾಂಧೀಜಿಯ ತತ್ವಗಳನ್ನು ಅಳವಡಿಸಿ ಕೊಂಡು ಹೋಗಬೇಕು. ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಹೊರಾಡುವುದರ ಜೊತೆಗೆ ಭಾರತೀಯ ಸಮಾಜದಲ್ಲಿದ್ದ ಪಿಡುಗುಗಳನ್ನು ನಿವಾರಿಸಲು ಪ್ರಯತ್ನಿಸಿದರು ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರ ನಾಥ್ ಭಟ್ ಮಿತ್ತೂರು, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಶಿರಸ್ತೇದಾರ್ ದಿವಾಕರ ಮುಗುಳಿಯ. ಪ್ರಭಾರ ಕಂದಾಯ ನಿರೀಕ್ಷಕರಾದ ಧರ್ಮ ಸಾಮ್ರಾಜ್ಯ ಮಂಜುನಾಥ್ ಕೆ.ಎಚ್, ಕುಮಾರ ಟಿ.ಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
ಚುನಾವಣೆ ಶಿರಸ್ತೇದಾರ್ ನವೀನ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.

