Friday, July 11, 2025

ಸುಂದರ ಭಾರತದ ಕನಸು ಕಂಡ ಗಾಂಧಿಯವರನ್ನು ಅಪಮಾನಿಸುವ ಘಟನೆ ಖಂಡನೀಯ: ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ : ಕಳ್ಳಿಗೆ, ಅಮ್ಮುಂಜೆ, ಕರಿಯಂಗಳ, ತೆಂಕಬೆಳ್ಳೂರು, ಬಡಗಬೆಳ್ಳೂರು, ಕುರಿಯಾಳ, ಅಮ್ಟಾಡಿ ಮತ್ತು ಅರಳ ವಲಯ ಕಾಂಗ್ರೆಸ್ ಸಮಿತಿ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ , ಉಚಿತ ಕಣ್ಣಿನ ಮತ್ತು ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಆರೋಗ್ಯ ಕಾರ್ಡು ವಿತರಣಾ ಕಾರ್ಯಕ್ರಮವು ಶನಿವಾರ ಪಚ್ಚಿನಡ್ಕ ತೊಡಂಬಿಲ ಚರ್ಚ್ ಹಾಲ್ ನಲ್ಲಿ ನಡೆಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹಾತ್ಮಾಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.

ಬಳಿಕ ಮಾತನಾಡಿದ ಅವರು, ಸುಂದರ ಹಾಗೂ ಸಾಮರಸ್ಯದ ಭಾರತದ ಕನಸನ್ನು ಕಂಡ ಗಾಂಧೀಜಿಯವರನ್ನು ಅಪಮಾನಿಸುವ ಘಟನೆಗಳು ನಡೆಯುತ್ತಿದ್ದು ಇದು ಖಂಡನೀಯ ಎಂದರು. ಈ ಬಗ್ಗೆ ಪ್ರಜ್ಞಾವಂತರು ಮೌನವಾಗಿರದೆ ಅದನ್ನು ವಿರೋಧಿಸುವ ಕೆಲಸ ಮಾಡಬೇಕು ಎಂದರು. ದೇಶ ಎಂದರೆ ಒಂದು ವ್ಯಕ್ತಿ, ಪಕ್ಷ ಅಲ್ಲ. ಹುತಾತ್ಮರಾದವರಿಗೆ ಅಗೌರವ ಕೊಡುವ ಕೆಲಸ ಮಾಡಬಾರದು ಎಂದ‌ ಅವರು,ಗಾಂಧೀಜಿಯ ಆಶಯದಂತೆ ಮತೀಯವಾದಕ್ಕೆ ಜಾತ್ಯಾತೀತವಾದ ಉತ್ತರವಾಗಲಿ ಎಂದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ವಂ.ಫಾದರ್ ವಿನ್ಸೆಂಟ್‌ ಲೋಬೋ,

ಬಿಲ್ಲವ ಮುಖಂಡ ಸೇಸಪ್ಪ ಕೋಟ್ಯಾನ್, ಫಾದರ್ ಮುಲ್ಲರ್ ಆಸ್ಪತ್ರೆ ರಕ್ತನಿಧಿ ಕೇಂದ್ರದ ಚಾರು ಕೋಸ್ಲಾ ವೇದಿಕೆಯಲ್ಲಿದ್ದರು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಬೇಬಿಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಸುದರ್ಶನ್ ಜೈನ್, ಅಬ್ಬಾಸ್ ಅಲಿ, ಸಂಜೀವ ಪೂಜಾರಿ, ಜಯಂತಿ ವಿ.ಪೂಜಾರಿ, ಮಲ್ಲಿಕಾ ಶೆಟ್ಟಿ, ಫ್ಲೋಸಿ ಡಿಸೋಜ, ಮಲ್ಲಿಕಾ ಪಕ್ಕಳ ಮೊದಲಾದವರು ಉಪಸ್ಥಿತರಿದ್ದರು.

ಚಂದ್ರಶೇಖರ ಭಂಡಾರಿ ಸ್ವಾಗತಿಸಿದರು. ನವಾಜ್ ವಂದಿಸಿದರು.‌ ಹಕೀಂ ಕಲಾಯಿ‌ ಕಾಯಕ್ರಮ ನಿರ್ವಹಿಸಿದರು.

More from the blog

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...