Monday, January 26, 2026

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ.

ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ ತಹಶಿಲ್ದಾರ್ ಅವರಿಗೆ ಮನವಿ ನೀಡಿದ್ದರು.

ಅ ಬಳಿಕ ಗಣಿಇಲಾಖೆಯಿಂದ ಪಲ್ಲಮಜಲು ಗಣಿಗಾರಿಕೆ ನಡೆಸುವ ಮಾಲಕರಿಗೆ ನೋಟೀಸ್ ಜಾರಿ ಮಾಡಿದ್ದ ಗಣಿಗಾರಿಕೆ ಸ್ಥಳದ ಪರಿಶೀಲನೆ ನಡೆಸಿತ್ತು. ಹಾಗಾಗಿ ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಮಾಡಿದ್ದರು.

ಆದರೆ ದೂರುದಾರರಿಗೆ ಗಣಿಗಾರಿಕೆ ವಿಚಾರದಲ್ಲಿ ಯಾವುದೇ ಮಾಹಿತಿ ನೀಡದೆ ಮೌನವಾಗಿದ್ದು, ಲಾರಿಗಳ ಮೂಲಕ ಜಲ್ಲಿಕಲ್ಲು ಮತ್ತೆ ಸಾಗಾಟ ಆರಂಭಿಸಿವೆ, ಎಂದು ಇಂದು ಗ್ರಾಮಸ್ಥರು ಲಾರಿಗಳನ್ನು ತಡೆದು ಪ್ರತಿಭಟಿಸಿದಾಗ ,ಲಾರಿ ಚಾಲಕರು ಜಲ್ಲಿಕಲ್ಲುಗಳನ್ನು ವಾಪಸು ಕೊರೆಯಲ್ಲಿ ಡಂಪ್ ಮಾಡಿದ ಘಟನೆ ನಡೆದಿದೆ ಎಂದು ತಿಳಿಸಲಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...