Friday, June 27, 2025

ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿಗೆ ಗಾಯ

ಬಂಟ್ವಾಳ: ಕೋವಿಯನ್ನು ಬಳಸುವಾಗ ಅಜಾಗರೂಕತೆಯಿಂದ ಆಕಸ್ಮಿಕ ವಾಗಿ ಗುಂಡು ಸಿಡಿದು ವ್ಯಕ್ತಿ ಯೋರ್ವರು ಗಾಯಗೊಂಡ ಘಟನೆ ಅ.30 ರಂದು ಸಂಭವಿಸಿದೆ.

ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ವಿಶ್ವನಾಥ ನಾಯ್ಕ ಎಂಬವರು ತನ್ನ ಜಮೀನಿಗೆ ಬಂದಿರುವ ಕಾಡು ಪ್ರಾಣಿಗಳನ್ನು ಓಡಿಸಲು ಪರವಾನಿಗೆ ಹೊಂದಿರುವ ಎಸ್‌ಬಿಎಂಎಲ್ ಕೋವಿಯನ್ನು ಉಪಯೋಗಿಸುವಲ್ಲಿ ಅಜಾಗರೂಕತೆ ಮಾಡಿದ ಪರಿಣಾಮ ಕೋವಿ ನೆಲಕ್ಕೆ ಬಿದ್ದು, ಆಕಸ್ಮಿಕವಾಗಿ ಗುಂಡು ಸಿಡಿದು ಅಂಗಳದಲ್ಲಿ ನಿಂತಿದ್ದ ಕುಮಾರಯ್ಯ ನಾಯ್ಕ ಎಂಬವರ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದು, ಗಾಯಾಳುವನ್ನು ವಿಶ್ವನಾಥ ನಾಯ್ಕ ರವರು ಆರೈಕೆ ಮಾಡಿ ಚಿಕಿತ್ಸೆಯ ಬಗ್ಗೆ ವಾಹನವೊಂದರಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ ಮೇರೆಗೆ, ಗಾಯಾಳುವನ್ನು ಮಂಗಳೂರು ತೇಜಸ್ವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಗಾಯಾಳುವನ್ನು ಒಳ ರೋಗಿಯಾಗಿ ದಾಖಲು ಮಾಡಿಕೊಂಡಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...