ಬಂಟ್ವಾಳ: ಕರ್ನಾಟಕ ಸರ್ಕಾರದ ಆದೇಶದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸುತ್ತೋಲೆಯನ್ನು ಅನುಸರಿಸಿ, ದ.ಕ ಜಿಲ್ಲಾಧಿಕಾರಿಯವರ ಆದೇಶವನ್ನು ಪಾಲಿಸುತ್ತಾ ಇಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರಾಥಮಿಕ ,ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳ ಸುಮಾರು 1500 ವಿದ್ಯಾರ್ಥಿಗಳು ಏಕಕಾಲದಲ್ಲಿ ಲಕ್ಷ ಕಂಠಗಳ ಗಾಯನ ಕಾರ್ಯದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಕನ್ನಡಕ್ಕಾಗಿ ನಾವು ಎಂಬ ಅಭಿಯಾನದಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಪುಷ್ಪಲತಾ, ಉಪಪ್ರಾಂಶುಪಾಲರಾದ ಉದಯಕುಮಾರ ಬಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಮೋನಪ್ಪ, ಪುಂಜಾಲಕಟ್ಟೆ ಸಮೂಹ ಸಂಪನ್ಮೂಲ ವ್ಯಕ್ತಿ ಚೇತನಾ ಹಾಗೂ ಮೂರು ಸಂಸ್ಥೆಗಳ ಸಿಬ್ಬಂದಿ ಬಳಗ ಅದೇ ರೀತಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಪ್ರತಿಜ್ಞಾ ವಿಧಿಯನ್ನು ಪ್ರೌಢಶಾಲಾ ಕನ್ನಡ ಶಿಕ್ಷಕಿಯಾದ ಶಾಂತ ಎಸ್ ನೆರವೇರಿಸಿದರೆ, ಧರಣೇಂದ್ರ ಕೆ ರವರು ಧನ್ಯವಾದ ಸಲ್ಲಿಸಿ ಕಾರ್ಯಕ್ರಮ ಅಂತಿಮ ರೂಪಕ್ಕೆ ತರಲಾಯಿತು

