ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಗಿರೀಶ್ ಕಾರ್ನಾಡ್(81) ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವಲ್ಲೆ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

ಗಿರೀಶ್ ಕಾರ್ನಾಡ್ ಅವರು 1938 ರ ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ.
ಕಾರ್ನಾಡರಿಗೆ ಸಂದ ಪ್ರಶಸ್ತಿಗಳು: ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ-1974, ಪದ್ಮಭೂಷಣ-1992, ಜ್ಞಾನಪೀಠ-1998, ಕಾಳಿದಾಸ ಸಮ್ಮಾನ್-1998ರಲ್ಲಿ ಲಭಿಸಿವೆ.