Thursday, January 29, 2026

ಮೇ.14 ರಂದು ಗೋವಾದ ಶ್ರೀ ಗೋಕರ್ಣ ಮಠಾಧೀಶರ ಪುರ ಪ್ರವೇಶ

ಮಂಗಳೂರು: ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪರಮ ಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಮೇ 14, 2023 ರಂದು ಸಂಜೆ 5.30 ಗಂಟೆಗೆ ತಮ್ಮ ಮೂಲ್ಕಿ ಮೊಕ್ಕಂನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ.

ಪುರ ಪ್ರವೇಶ ಮೆರವಣಿಗೆಯು ವಿ.ಟಿ.ರಸ್ತೆಯ ಚೇತನ ಶಾಲೆಯಿಂದ ಸಂಜೆ 6.00 ಗಂಟೆಗೆ ಆರಂಭವಾಗಿ 7.30ಕ್ಕೆ ಗೋಕರ್ಣ ಮಠ, ಕಾರ್ ಸ್ಟ್ರೀಟ್ ತಲುಪಲಿದೆ. ಸಂಸ್ಥಾನದ ಮಠಾಧಿಪತಿಯಾದ ನಂತರ ಪರಮಪೂಜ್ಯ ಸ್ವಾಮೀಜಿಯವರು ಪ್ರಥಮ ಬಾರಿಗೆ ಮಂಗಳೂರಿನ ಕಾರ್ ಸ್ಟ್ರೀಟ್ ‌ನಲ್ಲಿರುವ ತಮ್ಮ ಸ್ವಮಠಕ್ಕೆ ಭೇಟಿ ನೀಡುತ್ತಿದ್ದಾರೆ.

2023 ರ ಮೇ 14 ರಿಂದ 21 ರವರೆಗೆ ಪರಮ ಪೂಜ್ಯ ಸ್ವಾಮೀಜಿಯವರ ಮೊಕ್ಕಾಂನಲ್ಲಿ ಹಲವಾರು ಧಾರ್ಮಿಕ ಆಚರಣೆಗಳು, ಹವನಗಳು, ಮುದ್ರಾಧಾರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...