Saturday, July 12, 2025

ಸಾರಿಗೆ ಬಸ್ ಸಂಚಾರ ಆರಂಭ: ಖಾಸಗಿ ಬಸ್ ಓಡಲ್ಲ

ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿ ನೀರಿಕ್ಷೆಯಲ್ಲಿರುವ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಆರಂಭಸಲು ಸಿದ್ಧತೆ ಮಾಡಿಕೊಂಡಿವೆ. ಸಾರ್ವಜನಿಕರು ಕೂಡ ಪ್ರಯಾಣ ಆರಂಭಿಸಲು ಪ್ರಾರಂಭಿಸಿದ್ದಾರೆ.

ಲಾಕ್‍ಡೌನ್ ಸಡಿಲಿಕೆಯಾಗಿರುವ ಹಿನ್ನೆಲೆ ಕೋವಿಡ್-19 ಹರಡುವಿಕೆ ತಡೆಯಲು ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗಸೂಚಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ, ನಾಳೆಯಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭಿಸಲಿವೆ.

ಕಳೆದ 54 ದಿನಗಳಿಂದ ತುರ್ತು ಹಾಗೂ ಅಗತ್ಯ ಸೇವೆ ಹೊರತುಪಡಿಸಿ ನಗರ ಸಾರಿಗೆ ಸೇರಿದಂತೆ ರಾಜ್ಯಾದ್ಯಂತ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ನೂರಾರು ಕೋಟಿ ರೂ. ನಷ್ಟವನ್ನು ಸಾರಿಗೆ ಸಂಸ್ಥೆಗಳು ಅನುಭವಿಸಿದ್ದರೆ, ಬಸ್ ಸೌಲಭ್ಯವಿಲ್ಲದೆ, ಲಕ್ಷಾಂತರ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.

ಬಸ್ ಸಂಚಾರ ಆರಂಭವಾದರೆ ದೈನಂದಿನ ಕೆಲಸಗಳಿಗೂ ಅನುಕೂಲವಾಗಲಿದೆ. ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಬಸ್ ಸಂಚಾರಕ್ಕೆ ಅಗತ್ಯ ಸಿದ್ದತೆ ಮಾಡಿಕೊಂಡಿದ್ದು, ಕೇಂದ್ರ ಸರ್ಕಾರ ನೂತನ ಮಾರ್ಗಸೂಚಿ ನಿರೀಕ್ಷಿಸುತ್ತಿವೆ.

ಈಗಾಗಲೇ ಸಿಬ್ಬಂದಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ನಾಳೆಯಿಂದ ಹಾಜರಾಗುವಂತೆ ಸೂಚನೆ ನೀಡಲಾಗಿದೆ.ಕೆಲಸಕ್ಕೆ ಹಾಜರಾಗುವ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಥರ್ಮಲ್ ಪರೀಕ್ಷೆ ಮಾಡಲಾಗುತ್ತದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದು ಸೇರಿದಂತೆ ಸೋಂಕು ಹರಡುವಿಕೆ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಲಾಕ್‍ಡೌನ್ ಸಡಿಲಿಕೆಯಾಗಿದ್ದರೂ ಕೊರೋನಾ ಕಬಂಧ ಬಾಹು ಹಿಡಿತ ಮಾತ್ರ ಸಡಿಲಿಕೆ ಆಗಿಲ್ಲ. ಸಿಬ್ಬಂದಿ ನೌಕರರಷ್ಟೇ ಅಲ್ಲ, ಸಾರ್ವಜನಿಕರೂ ಕೂಡ ಸ್ವಯಂ ಜಾಗೃತಿ ವಹಿಸಬೇಕಾದ ಅಗತ್ಯ ಮತ್ತು ಅನಿವಾರ್ಯತೆ ಇದೆ.ಇಂದು ರಾತ್ರಿವೇಳೆಗೆ ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಹೊರಬೀಳಲಿದ್ದು, ಬಸ್ ಸಂಚಾರದ ಗೊಂದಲಕ್ಕೆ ತೆರೆ ಬೀಳಲಿದೆ.
ರಾಜ್ಯದಲ್ಲಿ ಖಾಸಗಿ ಸಂಚಾರ ನಡೆಸೋದು ಅನುಮಾನವಾಗಿದೆ. ಸರ್ಕಾರ ಲಾಕ್ ಡೌನ್ ಸಡಿಲಿಸಿ ಅನುಮತಿ ‌ಕೊಟ್ಟರೂ ಖಾಸಗಿ ಬಸ್ ಸಂಚಾರಿಸೋದು ಡೌಟ್. ಶೇ.50ರಷ್ಟು ಪ್ರಯಾಣಿಕರನ್ನು ತುಂಬಲು ಸರ್ಕಾರ ಮಾರ್ಗಸೂಚಿ ಹೊರಡಿಸಿದ್ರೆ ಬಸ್ ಸಂಚಾರ ಅನುಮಾನ. ಜೂನ್ ಒಂದರಿಂದಲೇ ಖಾಸಗಿ ಬಸ್ ಓಡಿಸಲು ಖಾಸಗಿ ಬಸ್ ಮಂಡಳಿ ತೀರ್ಮಾನಿಸಿದೆ.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...