Wednesday, July 2, 2025

ಕ್ಷೌರಿಕರಿಗೆ ಸರಕಾರದ ಸಹಾಯಧನ ಸ್ವಾಗತಾರ್ಹ

ಬಂಟ್ವಾಳ: ಕೋವಿಡ್-19 ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸವಿತಾ ಸಮಾಜದ ಕ್ಷೌರಿಕರಿಗೆ 5 ಸಾವಿರ ರೂ. ಸಹಾಯಧನ ಘೋಷಿಸಿರುವುದನ್ನು ಬಂಟ್ವಾಳ ತಾಲೂಕು ಸವಿತಾ ಸಮಾಜ ಸ್ವಾಗತಿಸಿದೆ.

ಪ್ರಸ್ತುತ ಈ ಸಹಾಯಧನವನ್ನು ಯಾವ ರೀತಿ ನೀಡುತ್ತದೆ ಎಂಬುದರ ಕುರಿತು ಮಾಹಿತಿ ಇಲ್ಲ. ಆದರೆ ಸರಕಾರವು ಅಸಂಘಟಿತ ಕಾರ್ಮಿಕರಿಗೆ ಸಹಾಯಧನವನ್ನು ಕಾರ್ಮಿಕ ಇಲಾಖೆಯ ಮೂಲಕ ವಿತರಿಸುತ್ತಿದ್ದು, ಅದನ್ನು ಪಡೆಯುವುದಕ್ಕೆ ಸ್ಮಾರ್ಟ್ ಕಾರ್ಡ್ ಅಗತ್ಯವಾಗಿದೆ.
ಹೀಗಾಗಿ ಮುಂದಿನ ದಿನಗಳಲ್ಲಿ ಸರಕಾರದ ಸೌಲಭ್ಯಕ್ಕಾಗಿ ಸ್ಮಾರ್ಟ್ ಕಾರ್ಡ್ ಮಾಡುವುದಕ್ಕೆ 60 ವರ್ಷದೊಳಗಿನ ಸವಿತಾ ಸಮಾಜದ ಕ್ಷೌರಿಕರು ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಮುಂಭಾಗದಲ್ಲಿರುವ ಸವಿತಾ ಸೌಹಾರ್ದ ಸೊಸೈಟಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ವೇಳೆ ಜನ್ಮ ದಿನಾಂಕ ದೃಢೀಕರಣಕ್ಕೆ ಜನನ ಪ್ರಮಾಣ ಪತ್ರ/ ಚಲನಾ ಪರವಾನಿಗೆ/ ಶಾಲಾ ದಾಖಲಾತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಇತ್ತೀಚಿನ 2 ಭಾವಚಿತ್ರ ನೀಡಬೇಕಿದೆ.
ಸಂಕಷ್ಟಕ್ಕೊಳಗಾದ ಸವಿತಾ ಸಮಾಜದ ಬಂಧುಗಳಿಗೆ ಈಗಾಗಲೇ ಸಂಘದ ವತಿಯಿಂದ ಕಿಟ್ ಗಳನ್ನು ವಿತರಿಸಲಾಗಿದೆ. ತಾಲೂಕಿನ ಸವಿತಾ ಸಮಾಜದ ಕ್ಷೌರಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗಾಗಿ ಸಂಘವು ಬಂಟ್ವಾಳ ಶಾಸಕರ ಬಳಿ ಮನವಿ ಮಾಡಿದೆ ಎಂದು ತಾಲೂಕು ಸಂಘದ ಅಧ್ಯಕ್ಷ ಸುರೇಶ್ ನಂದೊಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...