ಮಡಂತ್ಯಾರು: 2020-21 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಗ್ರಾಮ ಪಂಚಾಯತ್ ಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಟ್ಟು ಆಯ್ಕೆಯಾಗಿರುವ 7 ಗ್ರಾಮ ಪಂಚಾಯತ್ ಗಳಲ್ಲಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾ.ಪಂ.ಗೆ ಪುರಸ್ಕಾರ ಒಲಿದು ಬಂದಿದೆ.

2020-21 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಗ್ರಾಮ ಪಂಚಾಯತ್ ಗಳ ಆಯ್ಕೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೂಚನೆಯಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು (ತಾಲೂಕು ಪಂಚಾಯತ್ ನೋಡಲ್ ಅಧಿಕಾರಿಗಳು) ಸಂಬಂಧಪಟ್ಟ ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ವರದಿ ಸಲ್ಲಿಸಿದ್ದು, ಜಿಲ್ಲಾ ಸಮಿತಿಯಲ್ಲಿ ಚರ್ಚಿಸಿ ದ.ಕ. ಜಿಲ್ಲೆಯಾದ್ಯಂತ ಒಟ್ಟು 7 ಗ್ರಾಮ ಪಂಚಾಯತ್ ಗಳು ಆಯ್ಕೆಯಾಗಿರುತ್ತವೆ. ಅದರಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ವ್ಯಾಪ್ತಿಯ ಮಡಂತ್ಯಾರು ಪಂಚಾಯತ್ ಕೂಡ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ.

