ಬಂಟ್ವಾಳ: ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಪಂಚಾಯತ್ ನ 2018-19 ನೇ ಸಾಲಿನ ದ್ವಿತೀಯ ಗ್ರಾಮಸಭೆ ಈ ದಿನ ಗ್ರಾಮ ಪಂಚಾಯತ್ ಸುವರ್ಣ ಸೌಧದಲ್ಲಿ ನಡೆಯಿತು. ವಿವಿಧ ಇಲಾಖೆಗಳ ಮಾಹಿತಿ, ಸರ್ಕಾರದ ಯೋಜನೆಗಳು, ಆರ್ಥಿಕ ವರ್ಷದ ಕಾಮಗಾರಿಗಳ ಅನುಷ್ಠಾನ ಇತ್ಯಾದಿಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಲಾಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಠಲ್ ಅಧ್ಯಕ್ಷತೆ ವಹಿಸಿದ್ದರು. ಸಿಡಿಪಿಒ ಮಲ್ಲಿಕಾ ನೋಡಲ್ ಅಧಿಕಾರಿಯಾಗಿ ಸಭೆ ನಡೆಸಿಕೊಟ್ಟರು. ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ತಾ.ಪಂ.ಸದಸ್ಯೆ ಲಕ್ಷ್ಮೀ ಗೋಪಾಲಾಚಾರ್ಯ, ಉಪಾಧ್ಯಕ್ಷೆ ಪೂರ್ಣಿಮಾ ಪಿಡಿಒ ಸಂಧ್ಯಾ, ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಾರ್ವಜನಿಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಗ್ರಾಮದ ಬಿಪಿಎಲ್ ಪಡಿತರದಾರರಿಗೆ ಕೇಂದ್ರ ಸರಕಾರದ ಜನಪರ ಯೋಜನೆ ಉಜ್ವಲ-2 ಉಚಿತ ಗ್ಯಾಸ್ ಸಂಪರ್ಕವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಗ್ಯಾಸ್ ವಿತರಕರು ಮತ್ತು ಭಾಸ್ಕರ್ ಕಡ್ಮಡ್ಕ ಗ್ಯಾಸ್ ಬಳಕೆಯ ಬಗ್ಗೆ ಮಾಹಿತಿ ನೀಡಿದರು.