ಬಂಟ್ವಾಳ: ಗ್ರಾಮದ ಕಡೆ ಶಾಸಕರ ನಡೆ ಬಂಟ್ವಾಳ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಗ್ರಾಮ ಸ್ಪಂದನ ಕಾರ್ಯಕ್ರಮವು ಜೂ.28ರ ಶುಕ್ರವಾರ ನಡೆಯಲಿದೆ. ಬೆಳ್ಳಿಗೆನಿಂದ ಮಧ್ಯಾಹ್ನದವರೆಗೆ ಮಂಚಿ ಹಾಗೂ ಮಧ್ಯಾಹ್ನದ ಬಳಿಕ ಅಮ್ಟಾಡಿ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆ ಮತ್ತು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ವಿವಿಧ ಸ್ತರದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
