Tuesday, January 27, 2026

ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯಾದ್ಯಂತ ಸಾಕಷ್ಟು ಸವಾಲು ಎದುರಾಗ್ತಿದೆ. ಈ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಟ್ವಿಟ್ ಮೂಲಕ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು​, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ಅರ್ಹ ಫಲಾನುಭವಿಗಳು ಅಗತ್ಯವಿರುವ ದಾಖಲೆಗಳೊಂದಿಗೆ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು.

ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್‌ಎಂಎಸ್ ಅವಲಂಭಿಸದೇ ದಾಖಲಾತಿಗಳೊಂದಿಗೆ ನೇರವಾಗಿ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಯೋಜನೆಗೆ ಚಾಲನೆ ಸಿಕ್ಕ 7 ದಿನಗಳಲ್ಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿರುವುದು ಖುಷಿ ತಂದಿದೆ, ಇದಲ್ಲದೇ ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟಾರೆ ಇದುವರೆಗೆ 62,01,530 ಮಹಿಳೆಯರಿಂದ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...