Thursday, February 13, 2025

ಹಾಸ್ಟೆಲ್ ಬರಹ ವಿವಾದ ಅಧಿಕಾರಿ’ಯನ್ನು ಹುದ್ದೆಯಿಂದ ಅಮಾನತುಗೊಳಿಸಿ, ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್ ಸಿ ನಾರಾಯಣ್ ರೆಂಜ ಆಗ್ರಹ

ಕಾಂಗ್ರೆಸ್ ಸರ್ಕಾರ ಬಡ ಮಕ್ಕಳ ತಲೆಯಲ್ಲಿ ದ್ವೇಷದ ಕಿಚ್ಚನ್ನು ಹಚ್ಚಿಸಲು ರಾಷ್ಟ್ರಕವಿ ಕುವೆಂಪು ಅವರ ಸಾಲುಗಳನ್ನು ತಿರುಚಿ ಸಮಾಜದಲ್ಲಿ ವಿಷ ಬಿತ್ತುವ ನಾಚಿಕೆಗೇಡಿನ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಮಾಜಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಾಡಿದ್ದಾರೆ.

ಅತಿ ಹೆಚ್ಚು ವಿದ್ಯಾರ್ಥಿಗಳು ಹಿಂದುಳಿದ ವರ್ಗ ಬಡ ಕುಟುಂಬದಿಂದ ಬಂದವರು ಇರುತ್ತಾರೆ. ಅವರ ಭಾವನೆಗಳನ್ನು ಸರಕಾರ ಪ್ರಶ್ನಿಸಲು ಹೊರಟಿದೆ.

ಶಿಕ್ಷಣದಲ್ಲಿ ಸಂಸ್ಕೃತಿ-ಪರಂಪರೆ ಭಾರತೀಯತೆಯನ್ನು ತೆಗೆದು ನಕ್ಸಲ್‌ವಾದ, ಕಮ್ಯುನಿಸ್ಟ್ ಚಿಂತನೆಗಳನ್ನು ತುಂಬುವ ಮೂಲಕ ಭಾರತೀಯ ಶಿಕ್ಷಣ ಪರಂಪರೆಯನ್ನೇ ಅಡಿಮೇಲು ಮಾಡುವ ಕೆಲಸಕ್ಕೆ ಸಿದ್ದರಾಮಯ್ಯರವರ ಆಪ್ತ ಬಳಗ ಕೈ ಹಾಕಿದೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಿತ್ತುಹಾಕಿ, ಶಾಲೆಗಳಲ್ಲಿ ಹಬ್ಬಹರಿದಿನಗಳನ್ನು ಆಚರಿಸದಂತೆ ಆದೇಶಿಸಿದ್ದ ಈ ಕಾಂಗ್ರೆಸ್ ಸರ್ಕಾರ, ಈಗ ಎಡ-ಬಿಡಂಗಿ “ಅಧಿಕಾರಿ”ಗಳ ಸಹಾಯದಿಂದ, ಕರ್ನಾಟಕದ ಭವಿಷ್ಯದ ತಲೆಮಾರುಗಳನ್ನು ಕತ್ತಲಿಗೆ ತಳ್ಳುತ್ತಿದೆ.
ಪಾಠ ಮಾಡುವ ಶಿಕ್ಷಕರೇ, ‘ಕೈ ಮುಗಿದು ಒಳಗೆ ಬನ್ನಿ ಎನ್ನುವುದು ಮಕ್ಕಳಿಗೆ ಕಲಿಸುವ ಸಂಸ್ಕಾರ,
ಈ ಅಧಿಕಾರಿಗೆ ಮಕ್ಕಳ ಶೈಕ್ಷಣಿಕ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಅಧಿಕಾರ ನೀಡಿದ್ದು ಯಾರು?
ಈ ಕೂಡಲೇ ‘ಅಧಿಕಾರಿ’ಯನ್ನು ಹುದ್ದೆಯಿಂದ ಅಮಾನತುಗೊಳಿಸಿ, ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್ ಸಿ ನಾರಾಯಣ್ ರೆಂಜ ಆಗ್ರಹಿಸಿದ್ದಾರೆ

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...