Monday, January 26, 2026

ಕುಟುಂಬ ಸಮೇತರಾಗಿ ಕಾಂತರ ಸಿನಿಮಾ ವೀಕ್ಷಿಸಿದ ಡಾ। ಡಿ. ವಿರೇಂದ್ರ ಹೆಗ್ಗಡೆ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ। ಡಿ. ವಿರೇಂದ್ರ ಹೆಗ್ಗಡೆ ಅವರು ನಿನ್ನೆ ಸಂಜೆ ಮಂಗಳೂರಿನ ಸಿನೆಮಾ ಮಂದಿರದಲ್ಲಿ ಕಾಂತಾರ ಕನ್ನಡ ಚಲನಚಿತ್ರವನ್ನು ಕುಟುಂಬ ಸಮೇತ ವೀಕ್ಷಿಸಿದರು.

ಸಿನೆಮಾ ವೀಕ್ಷಿಸಿದ ಬಳಿಕ ಡಾ। ವೀರೇಂದ್ರ ಹೆಗ್ಗಡೆ ಅವರು ಮಾಧ್ಯಮದವರ ಜತೆ ಮಾತನಾಡಿ, ನಾನು ಸಿನೆಮಾ ನೋಡದೆ ಬಹಳ ದಿನಗಳಾಗಿವೆ. ಕಾಂತಾರ ಸಿನೆಮಾ ಒಂದು ಪ್ರದೇಶದ ನಡೆ-ನುಡಿ, ಸಂಸ್ಕೃತಿ, ಆಚಾರ-ವಿಚಾರಗಳನ್ನೊಳಗೊಂಡು ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರವು ಯುವಕರಿಗೆ ಹೊಸ ಕತೆ ಹಾಗೂ ಹಿಂದಿನ ನಂಬಿಕೆಗಳನ್ನು ನೆನಪಿಸುತ್ತದೆ ಎಂದರು.

ನಟ ಚೇತನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ದೈವಾರಧನೆಯು ಎರಡೂ ಜಿಲ್ಲೆಯಲ್ಲಿ ವ್ಯಾಪಕವಾಗಿ ಬೆಳೆದಿದೆ. ಇದು ಹಿಂದಿನಿಂದಲೂ ಬಂದ ಸಂಸ್ಕೃತಿ.

ಚೇತನ್ ಅವರು ಹಿಂದೂ ಧರ್ಮದ ಸೂಕ್ಷ್ಮತೆಯನ್ನು ಯಾವ ರೀತಿ ನೋಡಿದ್ದಾರೆ ತಿಳಿದಿಲ್ಲ. ಧರ್ಮದ ಆಚರಣೆಯನ್ನು ವಿಮರ್ಶಿಸುವ ಅಗತ್ಯವಿಲ್ಲ ಎಂದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...