Saturday, January 31, 2026

ಕರ್ನಾಟಕದಲ್ಲಿ ಹೆಚ್​​3ಎನ್​​2ಗೆ​​ ಮೊದಲ ಬಲಿ ; ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಕೊರೊನದಿಂದ ತತ್ತರಿಸಿದ್ದ ಜನರಿಗೆ ಮತ್ತೊಂದು ಶಾಕ್​ ಕೊಡುವಂತ ವೈರಸ್ ಹೆಚ್3ಎನ್2 ದೇಶದಲ್ಲಿ ಕಾಣಿಸಿಕೊಂಡಿತ್ತು. ಇದೀಗ ರಾಜ್ಯದಲ್ಲಿ ಹೆಚ್3ಎನ್2ಗೆ ಮೊದಲ ಬಲಿಯಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹಾಸನದ ಆಲೂರು ತಾಲೂಕಿನ 78 ವರ್ಷದ ವೃದ್ಧನು ಮಾರಣಾಂತಿಕ ಹೆಚ್3ಎನ್2 ವೈರಸ್​ನಿಂದ ಮೃತಪಟ್ಟಿರುವುದಾಗಿ ಅರೋಗ್ಯ ಇಲಾಖೆ ಅಧಿಕೃತವಾಗಿ ಮಾಹಿತಿ ನೀಡಿದೆ. ವೃದ್ಧನು ಜ್ವರ, ಗಂಟಲು ನೋವು, ಕೆಮ್ಮಿನಿಂದ ಬಳಲುತ್ತಿದ್ದು ಮಾರ್ಚ್ 1 ರಂದು ಆಲೂರಿನಲ್ಲಿ ಮೃತಪಟ್ಟಿದ್ದನು. ಈ ಬಗ್ಗೆ ಆರೋಗ್ಯ ಇಲಾಖೆ ಇವತ್ತು ಹೆಚ್3ಎನ್2 ಗೆ ಮೊದಲ ಬಲಿಯಾಗಿರುವುದಾಗಿ ಮಾಹಿತಿ ನೀಡಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್3ಎನ್2 ವೈರಸ್‌ಗೆ ತುತ್ತಾದವರ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿವೆ. ಹಾಸನ ಜಿಲ್ಲೆಯಲ್ಲೇ ಆರು ಮಂದಿಗೆ ಹೆಚ್3ಎನ್2 ವೈರಸ್ ಇರೋದು ಪತ್ತೆಯಾಗಿದೆ. ಜ್ವರ, ಚಳಿ, ಗಂಟಲಿನ ಸಮಸ್ಯೆಯಿಂದ ಬಳಲುತ್ತಾ ಇರುವವರು ಎಚ್ಚರಿಕೆಯಿಂದ ಇರಬೇಕು. ಕೊಮಾರ್ಬಿಡ್ ಮತ್ತು 60 ವರ್ಷ ಮೇಲ್ಪಟ್ಟವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ.

More from the blog

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...