Saturday, January 31, 2026

ತಾಲೂಕಿನ ಹಲವೆಡೆ ಮಳೆ ಹಾನಿ

ಬಂಟ್ವಾಳ: ಸೋಮವಾರ ರಾತ್ರಿ ಸುರಿದ ವರುಣನ ಆರ್ಭಟಕ್ಕೆ ಬಂಟ್ವಾಳ ತಾಲೂಕಿನ‌ ಹಲವೆಡೆ ಮನೆಗಳಿಗೆ ಹಾಗೂ ಕೃಷಿಗೆ ಹಾನಿಯಾಗದ ಬಗ್ಗೆ ವರದಿಯಾಗಿದೆ.

ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಶಂಭೂರು ನಿವಾಸಿ ರಾಧ ಅವರ ವಾಸ್ತವ್ಯದ ಮನೆಗೆ ಸೋಮವಾರ ಸುರಿದ ಮಳೆಗೆ ಹಾನಿಯಾಗಿದೆ.

ಪಂಜಿಕಲ್ಲು ಗ್ರಾಮದ ಪಾಂಗಳ ನಿವಾಸಿ ಅಣ್ಣು ಪೂಜಾರಿ ಅವರ ಫಸಲು ನೀಡುವ 20 ಅಡಿಕೆ ಗಿಡಗಳು ಗಾಳಿ ಮಳೆಗೆ ತುಂಡಾಗಿ ಬಿದ್ದಿವೆ.

ಅಮ್ಟಾಡಿ ಗ್ರಾಮದ ಲೋಕನಾಥ ಅವರ ಮನೆಗೆ ತಾಗಿಕೊಂಡಿರುವ ದನದ ಹಟ್ಟಿಗೆ ಹಾನಿಯಾಗಿದೆ.

ಮಂಚಿ ಗ್ರಾಮದ ಕಡಂಗಡಿ ಭಗೀರಥಿ ಅವರ ಮನೆಯ ಹಿಂಬದಿ ಬದಿಯ ಗೋಡೆ ಸಂಪೂರ್ಣ ಜರಿದು ಬಿದ್ದ ಬಗ್ಗೆ ತಾಲೂಕು ಆಡಳಿತ ಅಧಿಕೃತ ಮಾಹಿತಿ ನೀಡಿದೆ.

ಘಟನಾ ಸ್ಥಳಕ್ಕೆ ಅಯಾಯ ಗ್ರಾಮದ ಅಧಿಕಾರಿಗಳು ಬೇಟಿ‌ನೀಡಿ ಪರಿಶೀಲನೆ ನಡೆಸಿ ಕ್ರಮಕೈಗೊಂಡಿದ್ದಾರೆ

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...