Tuesday, July 8, 2025

ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬಂಟ್ವಾಳ: ಬಂಟ್ವಾಳ ನಗರ ಪೋಲೀಸ್ ಠಾಣೆಯ ಬಳಿ ಇರುವ ಹೋಟೆಲೊಂದರ ಅಂಗಳದಲ್ಲಿ ಯುವಕರಿಬ್ಬರು ಸೇರಿ ದಲಿತ ಯುವಕನ ಮೇಲೆ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಅಮ್ಟಾಡಿ ನಿವಾಸಿ ದಲಿತ ಯುವಕ  ಸಂತೋಷ್ ಎಂಬಾತನಿಗೆ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದ ಪರಿಣಾಮ ಈತ ಬಂಟ್ವಾಳ ಸಮುದಾಯ ಆಸ್ಪತ್ರೆ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.


ಜಿ.ಪಂ.ಸದಸ್ಯ ರೋರ್ವರಿಗೆ ಅವ್ಯಾಚ್ಚವಾಗಿ ಸಂತೋಷ್ ಬೈದಿದ್ದಾನೆ ಎಂದು ಆರೋಪಿಸಿ ಪಚ್ಚಿನಡ್ಕ ನಿವಾಸಿ ಶರಣ್ ಮತ್ತು ಯತೀಶ್ ಸೇರಿಕೊಂಡು ಸಂತೋಷ್ ಅವರಿಗೆ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.
ಆರೋಪಿ ಶರಣ್ ಮತ್ತು ಯತೀಶ್ ಎಂಬಾತನನ್ನು ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಸಂತೋಷ್ ಅವರಿಗೆ ಶರಣ್ ಹಾಗೂ ಯತೀಶ್ ಅವರು ಮಾರಣಾಂತಿಕ ಹಲ್ಲೆ ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂದು ಬಂಟ್ವಾಳ ನಗರ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದೆ.

More from the blog

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ..

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌ ಲಸಿಕೆ...

ಸರಪಾಡಿ : 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಬಜ ಆಯ್ಕೆ..

ಬಂಟ್ವಾಳ : ಶರಭೇಶ್ವರ ದೇವಸ್ಥಾನ ಸರಪಾಡಿ ಇದರ 34ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 3ನೇ ಬಾರಿ ಚೇತನ್ ಬಜ ಆಯ್ಕೆಯಾಗಿದ್ದಾರೆ.    

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...

ಕುಜ್ಲುಬೆಟ್ಟು ಶಾಲೆ : ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂಟ್ವಾಳ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶಾಲಾಭಿವೃದ್ಧಿ ಸಮಿತಿ ಕುಜ್ಲುಬೆಟ್ಟು ಇದರ ಸಹಯೋಗದೊಂದಿಗೆ ಇಂದು ಶಾಲಾ ಪರಿಸರದಲ್ಲಿ...