Saturday, January 31, 2026

ಹಳ್ಳಿಯ ಜನತೆಯಲ್ಲಿ ಆರೋಗ್ಯದ ಜಾಗೃತಿಗಾಗಿ ವೈದ್ಯರ ನಡೆ ಹಳ್ಳಿ ಕಡೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಹಳ್ಳಿಯ ಜನತೆಯಲ್ಲಿ ಆರೋಗ್ಯದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರಕಾರ ವೈದ್ಯರ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವನ್ನು ಅನುಷ್ಠಾನಿಸಿದ್ದು, ಈ ಮೂಲಕ ವೈದ್ಯರ ತಂಡ ಪ್ರತಿ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆಯ ಜತೆಗೆ ಮಾಹಿತಿ ನೀಡುವ ಕಾರ್ಯ ಮಾಡಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಸೋಮವಾರ ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬಂಟ್ವಾಳ ತಾಲೂಕು ಮಟ್ಟದ ವೈದ್ಯರ‌ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತಹಶೀಲ್ದಾರ್ ರಶ್ಮಿ ಎಸ್. ಆರ್.ಮಾತನಾಡಿ, ತಾಲೂಕಿನ ೧೭ ಕೇಂದ್ರಗಳಲ್ಲೂ ಈ ಕಾರ್ಯ ಪ್ರಾರಂಭಗೊಂಡಿದ್ದು, ಎ.ಜೆ.ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮನೆ ಮನೆಗೆ ಭೇಟಿ ನೀಡಿ ಪರೀಕ್ಷೆ ನಡೆಸುವ ಕಾರ್ಯ ಮಾಡಲಿದ್ದಾರೆ ಎಂದರು.

ಮಾಜಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ, , ಬಾಳ್ತಿಲ ಆರೋಗ್ಯ ಕೇಂದ್ರದ ಡಾ! ಚೈತ್ರ, ಎ.ಜೆ ಆಸ್ಪತ್ರೆಯ ವೈದ್ಯಾಧಿಕಾರಿ ಗಳಾದ ಡಾ! ಅರ್ಜುನ, ಡಾ! ರೋಹಿತ್ ರೆಡ್ಡಿ, ಡಾ! ಪ್ರತೀಕಾ, ಡಾ! ಮೋಹಿತ್ , ಡಾ! ರೀತು , ಆರ್.ಬಿ‌.ಎಸ್.ಕೆ.ವೈದ್ಯಾಧಿಕಾರಿ ಡಾ! ಯಶೋಧ,

ಪಂಚಾಯತ್ ಅಧ್ಯಕ್ಷೆ ಹಿರಣ್ಣ್ಮಯಿ,ಉಪಾಧ್ಯಕ್ಷೆ ಜ್ಯೋತಿ ಗ್ರಾ.ಪಂ.ಸದಸ್ಯರಾದ ಚಂದ್ರಶೇಖರ, ಮಲ್ಲಿಕಾ, ಗ್ರಾಮ ಕರಣೀಕೆ ಯಶ್ವಿತಾ, ಆಶಾ ಕಾರ್ಯಕರ್ತರು, ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಗಳು ಉಪಸ್ಥಿತರಿದ್ದರು.

ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...