Friday, June 27, 2025

ಎ.15ರಿಂದ ಎಂಡೋಸಲ್ಫಾನ್‌ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣ ಶಿಬಿರಗಳನ್ನು ಎ.15ರಿಂದ 19ರ ವರೆಗೆ ಜಿಲ್ಲೆಯ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಎ. 15ರಂದು ಪುತ್ತೂರಿನ ಪಾಣಾಜೆ, ಎ. 18ರಂದು ಬೆಳ್ತಂಗಡಿಯ ಕಣಿಯೂರು, ಪುತ್ತೂರಿನ ಕೋಯಿಲಾ, ಉಪ್ಪಿನಂಗಡಿ, ಸುಳ್ಯದ ಬೆಳ್ಳಾರೆ ಹಾಗೂ ಎ. 19ರಂದು ಬೆಳ್ತಂಗಡಿಯ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...