Wednesday, February 12, 2025

ಡ್ರೈವಿಂಗ್ ಮಾಡುವಾಗಲೇ ಲಾರಿ ಚಾಲಕ ಹೃದಯಘಾತದಿಂದ ಡೆತ್

ಬಂಟ್ವಾಳ: ಲಾರಿ ಚಾಲನೆ ಮಾಡುತ್ತಿದ್ದ ವೇಳೆ ಚಾಲಕನೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.

ಅಲ್ ಮದೀನ ಲಾರಿ ಚಾಲಕ ವೇಣೂರು ನಿವಾಸಿ ಲತೀಫ್ ಎಂಬವರು ಹೃದಯ ಘಾತದಿಂದ ಮೃತಪಟ್ಟವರು. ಮುಲಾರಪಟ್ನ ಪಲ್ಗುಣಿ ನದಿಯಿಂದ ಟಿಪ್ಪರ್ ಲಾರಿಯಲ್ಲಿ ಮರಳು ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಸಿದ್ದಕಟ್ಟೆ ಎಂಬಲ್ಲಿ ಲಾರಿ ಚಾಲನೆಯಲ್ಲಿರುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತು.
ಕೂಡಲೇ ಸ್ಥಳೀಯರು ಸೇರಿಕೊಂಡು ಸಿದ್ದಕಟ್ಟೆ 108 ಅಂಬ್ಯುಲೆನ್ಸ್ ಮೂಲಕ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲು ಹೊರಟು ಬರುವ ವೇಳೆ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...