Friday, January 30, 2026

ಸಾಂಕ್ರಾಮಿಕ ರೋಗಗಳ ತಡೆಗೆ ಸಮುದಾಯದ ಸಹಕಾರ ಅಗತ್ಯ: ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ|ಕಿಶೋರ್

ಬಂಟ್ವಾಳ: ಹಲವು ಸವಾಲುಗಳನ್ನು ಎದುರಿಸಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಕೆಲಸ ಮಾಡುತ್ತಿದ್ದು, ಸಾಂಕ್ರಾಮಿಕ ರೋಗಗಳ ತಡೆಗೆ ಸಮುದಾಯದ ಸಹಕಾರ ಅತೀ ಅಗತ್ಯವಾಗಿದೆ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದನ್ವಯ ಬುಧವಾರ ಆಯೋಜಿಸಲಾಗಿದ್ದ ಪತ್ರಕರ್ತರಮಾಹಿತಿ ಕಾರ್ಯಾಗಾರದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಕೊರೊನಾ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಿಮೆಯಾಗಿದೆ, ಸುಸಜ್ಜಿತ ಆರೋಗ್ಯ ವ್ಯವಸ್ಥೆಯ ಕಾರಣದಿ‌ಂದ ಹೊರಜಿಲ್ಲೆಯವರು ನಮ್ಮ ಜಿಲ್ಲೆಗೆ ಬಂದು ದಾಖಲಾಗುವ ಕಾರಣ, ಸಾವಿನ ಸಂಖ್ಯೆಯಲ್ಲಿ ಆ ಭಾಗದವರೂ ಸೇರ್ಪಡೆಯಾಗುತ್ತಾರೆ. ಕೊರೊನಾ ಎರಡನೇ ಅಲೆ ಸಂದರ್ಭ ಜಿಲ್ಲೆಯಲ್ಲಿ ಎಲ್ಲಿಯೂ ಆಸ್ಪತ್ರೆಯ ಕೊರತೆ, ಆಕ್ಸಿಜನ್ ಕೊರತೆಯಾಗಲೀ ಆಗಿಲ್ಲ, ಸಂಭಾವ್ಯ ಮೂರನೇ ಅಲೆ ಎದುರಿಸಲೂ ಇಲಾಖೆ ಸನ್ನದ್ಧವಾಗಿದ್ದು, ತನ್ನ ಇತರ ಕಾರ್ಯಗಳ ನಡುವೆ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಿದೆ ಎಂದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂಪನ್ಮೂಲ‌ವ್ಯಕ್ತಿಯಾಗಿ ಆಗಮಿಸಿದ್ದ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ನಿಂತಿರುವ ಸ್ವಚ್ಛ ನೀರಿನಲ್ಲಿ ಹುಟ್ಟಿಕೊಳ್ಳುವ ಸೊಳ್ಳೆಗಳಯ ಮಲೇರಿಯಾ ಮತ್ತು ಡೆಂಘೆ ರೋಗಗಳ ತೀವ್ರತೆಗೆ ಕಾರಣವಾಗುತ್ತದೆ. ಈ ಹಂತದಲ್ಲಿ ಇಲಾಖೆಗಳು ಎಷ್ಟು ಕಾಳಜಿ ವಹಿಸಿದರೂ ಅದಕ್ಕಿಂತ ಮುಖ್ಯವಾಗಿ ಜನರು ಜಾಗೃತಿ ವಹಿಸುವುದು ಅತೀ ಅಗತ್ಯ ಎಂದರು. ಸೊಳ್ಳೆ ಉತ್ಪತ್ತಿಯಾಗುವುದನ್ನು ನಿಯಂತ್ರಣಗೊಳಿಸಿದರೆ, ಮಲೇರಿಯಾ ಡೆಂಘೆಯನ್ನು ಕಡಿಮೆ ಮಾಡಬಹುದು.ಫಾಗಿಂಗ್ ಅಥವಾ ಇತರ ತಾತ್ಕಾಲಿಕ ಪರಿಹಾರಗಳ ಬದಲು ರೋಗವಾಹಕಗಳ ನಾಶ ಮಾಡಬೇಕು, ಮಹಡಿ ಮೇಲೆ ನಿಂತ ನೀರು, ಎಸೆದ ತ್ಯಾಜ್ಯ, ಮಳೆ ನೀರು ನಿಂತ ಜಾಗಗಳು ಸೊಳ್ಳೆಯುತ್ಪಾದನೆಗೆ ಪೂರಕವಾಗಿದ್ದು, ಸೊಳ್ಳೆಯ ಕುರಿತು ಗಂಭೀರವಾಗಿ ಜನರು ಜಾಗೃತಗೊಂಡರೆ ಮಲೇರಿಯಾ ನಿಯಂತ್ರಣ ಸಾಧ್ಯ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಸ್ವಾಗತಿಸಿ, ವಂದಿಸಿದರು. ತಾಲೂಕು ಆರೋಗ್ಯ ನಿರೀಕ್ಷಕಿ ಕುಸುಮಾ‌ ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...