Monday, January 26, 2026

ಜು.26 ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು. 26ರ ಬುಧವಾರ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...