Monday, February 2, 2026

ಹೊರೈಝನ್ ಸ್ಕೂಲ್ ಶಿಕ್ಷಕ-ರಕ್ಷಕ ಸಭೆ

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕ ಸಭೆಯು ಶಾಲೆಯ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಮಸೀದಿಯ ಅಧ್ಯಕ್ಷ ಇಬ್ರಾಹಿಂ ಮೇಗಿನಪೇಟೆ, ಶಾಲೆಯ ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆಕಾರ್ಯದರ್ಶಿ ಹನೀಫ್ ಎಂ.ಎ.,ಸಂಚಾಲಕ ನೋಟರಿ ಅಬೂಬಕರ್, ಮೇಲ್ವಿಚಾರಕ ವಿ.ಕೆ.ಎಂ.ಅಶ್ರಫ್, ಸದರ್ ಉಮರ್ ಸಅದಿ, ಟ್ರಸ್ಟಿಗಳಾದ ಸಿದ್ದೀಕ್ ಮಾಲಮೂಲೆ, ಅಬ್ದುಲ್ ರಹಿಮಾನ್ ದೀಪಕ್, ಇಕ್ಬಾಲ್ ಹಳೆಮನೆ, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.
ಖತೀಬ್ ಮಹಮ್ಮದ್ ಅಲಿ ಫೈಝಿ ದುವಾ ನೆರವೇರಿಸಿದರು. ಮುಖ್ಯ ಶಿಕ್ಷಕಿ ವಿಲಾಸಿನಿ ಪ್ರಸ್ತಾವನೆ ಗೈದರು. ಸಹಶಿಕ್ಷಕಿ ಚೈತ್ರಾ ಸ್ವಾಗತಿಸಿದರು. ಮಾಸಿತಾ ವಂದಿಸಿದರು. ಶಿಕ್ಷಕಿ ಚೇತನಾ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭ ಶಾಲಾ ಮತ್ತು ಮದರಸದ ಶಿಕ್ಷಕರು ಉಪಸ್ಥಿತರಿದ್ದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...