Tuesday, July 8, 2025

ಮುನ್ನೆಚ್ಚರಿಕೆ ವಹಿಸಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಬಹುದು – ಸಿಎಂ ಬಿ.ಎಸ್.ವೈ. ಸೂಚನೆ

ಬೆಂಗಳೂರು: ಕೊವಿಡ್-19 ಸೋಂಕು ತಡೆಯಲು ನಾಲ್ಕು ಹಂತಗಳಲ್ಲಿ ಲಾಕ್ ಡೌನ್ ಹೇರಲಾಗಿದ್ದು ಅದನ್ನು ಹಿಂಪಡೆಯುವ ಪ್ರಕ್ರಿಯೆ ಆರಂಭವಾಗಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ಈ ವಿಚಾರ ತಿಳಿಸಿದರು.
ಹೊಸ ಮಾರ್ಗಸೂಚಿಯಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಮಾಸ್ಕ್ ಗಳ ಬಳಕೆ, ಗ್ಲೌಸ್ ಬಳಕೆ ಮಾಡಬೇಕು ಹಾಗೂ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇವುದರ ಜೊತೆಗೆ ಇತರ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಿಎಂ ಸೂಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು, ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು. ಈ ಸಂದರ್ಭ ಬಸ್ ಮಾಲಕರ ಸಂಘ, ಹೋಟೆಲ್ ಮಾಲೀಕರ‌ ಸಂಘ ಹಾಗೂ ಟ್ಯಾಕ್ಸಿ ಮಾಲಿಕರ‌ ಸಂಘಗಳ ನಿಯೋಗವು ಸರ್ಕಾರದ ಮುಂದೆ‌ ಕೆಲ ಬೇಡಿಕೆಗಳನ್ನು‌ ಮುಂದಿಟ್ಟಿದ್ದು ಅವೆಲ್ಲವನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸಿ.ಎಂ. ಭರವಸೆ ನೀಡಿದರು.

More from the blog

ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ : ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರಿಂದ ದಾಳಿ..

ಬಂಟ್ವಾಳ: ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ದಾಳಿ ನಡೆಸಿದ ಘಟನೆ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ,ಅಜ್ಜಿ ಬಾಕಿಮಾರು ಸೂರ್ಯಚಂದ್ರಜನರಲ್ ಸ್ಟೋರ್...

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ..

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌ ಲಸಿಕೆ...

ಸರಪಾಡಿ : 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಬಜ ಆಯ್ಕೆ..

ಬಂಟ್ವಾಳ : ಶರಭೇಶ್ವರ ದೇವಸ್ಥಾನ ಸರಪಾಡಿ ಇದರ 34ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 3ನೇ ಬಾರಿ ಚೇತನ್ ಬಜ ಆಯ್ಕೆಯಾಗಿದ್ದಾರೆ.    

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...