ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15 ರಂದು ಶನಿವಾರ ಮಧ್ಯಾಹ್ನ ಹಸ್ತಾಂತರ ಹಾಗೂ ಗೃಹಪ್ರವೇಶ ಕಾರ್ಯಕ್ರಮ ನಡೆಯಲಿದೆ.

ಅನಂತಾಡಿ ಶ್ರೀ ಉಳ್ಳಾಲ್ತಿ ದೇವಸ್ಥಾನದ ಪ್ರಧಾನ ಅರ್ಚಕ ಕೊಬ್ರಿಮಠ ಗೋಪಾಲಕೃಷ್ಣ ಬನ್ನಿಂತಾಯ, ಶಾಸಕ ರಾಜೇಶ್ ನಾಯ್ಕ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲದ ರೈತ ಮೋರ್ಚಾದ ಅಧ್ಯಕ್ಷ ಸನತ್ ಕುಮಾರ್ ರೈ ಅವರು ತಿಳಿಸಿದ್ದಾರೆ.