Wednesday, February 12, 2025

ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ-ಸುಧೀರ್ ಸಾಗರ್

ಕಲ್ಲಡ್ಕ: ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ ಮಾತ್ರ ಉತ್ತಮವಾದ ಕಲಿಕೆಯನ್ನು ಹೊಂದಲು ಸಾಧ್ಯ ಎಂಬುದಾಗಿ ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷರಾದ ಸುಧೀರ್ ಸಾಗರ್ ಹೇಳಿದರು.

ಅವರು ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಗೆ ತಮ್ಮ ವತಿಯಿಂದ ಬಾಲವನವನ್ನು ನೀಡಿ ಉದ್ಘಾಟಿಸಿದ ಮಾತನಾಡಿದರು.

ಕಾರ್ಯಕ್ರಮದಲ್ಲಿಶಾಲಾ ದತ್ತು ಸಂಸ್ಥೆಯ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ರವರ ಸಹೋದರ ಶ್ರೀದೇವಿ ಕನ್ಸ್ಟ್ರಕ್ಷನ್ ಮಾಲಕರಾದ ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಕರ್ಕೆರ ಎಸ್ ಎಸ್ ಇಂಡಸ್ಟ್ರೀಸ್ ಬಂಟ್ವಾಳ ಇದರ ಪ್ರೇಮನಾಥ ಕೆ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ , ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಸ್ವಾಗತಿಸಿ. ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...