ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಅವರ ಸಹೋದರನ ಮನೆ ಮೇಲೆ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಅಶೋಕ್ ರೈ ಸಹೋದರ ಕೆ. ಸುಬ್ರಹ್ಮಣ್ಯ ರೈ ಅವರ ಮೈಸೂರಿನಲ್ಲಿರುವ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಅವರ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಈ ವೇಳೆ ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ಬ್ಯಾಗ್ ಒಂದು ನೇತು ಹಾಕಲಾಗಿತ್ತು. ಅದನ್ನು ತೆಗೆದು ಪರಿಶೀಲಿಸಿದಾಗ ಅದರಲ್ಲಿ ಬರೋಬ್ಬರಿ 1 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ. ಬಳಿಕ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಮರದಲ್ಲಿ ನೇತು ಹಾಕಿದ್ದ ಹಣವನ್ನು ವಶಪಡಿಸಿಕೊಂಡಿರುವ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.












