Monday, February 10, 2025

ನಳ್ಳಿ ನೀರು ಬಳಕೆ ಕಡ್ಡಾಯ ಮೀಟರ್ ಅಳವಡಿಕೆ: ಇಡ್ಕಿದು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ

ವಿಟ್ಲ: ಇಡ್ಕಿದು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಇಡ್ಕಿದು-ಕುಳ ಸಾಮಾನ್ಯ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಾವತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ ವೈಯುಕ್ತಿಕ ನಳ್ಳಿನೀರಿನ ಮೀಟರ್ ಅಳವಡಿಸಿದ್ದು ಮುಂದಿನ ತಿಂಗಳಿನಿಂದ ಕಡ್ಡಾಯವಾಗಿ ಮೀಟರ್ ರೀಡಿಂಗ್ ಮಾಡಿ ಕರ ವಸೂಲಿ ಮಾಡುವಂತೆ ನೀರಿನ ಕರವಸೂಲಿಗಾರರಿಗೆ ಸೂಚಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಗಳ ಚರಂಡಿಗಳನ್ನು ತುರ್ತಾಗಿ ದುರಸ್ತಿ ಮಾಡುವಂತೆ ನಿರ್ಣಯ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ನೈರ್ಮಲ್ಯ ಸಮಿತಿಯನ್ನು ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಸದಸ್ಯರನ್ನೊಳಗೊಂಡಂತೆ ರಚಿಸಿ ಕಾರ್‍ಯವೈಖರಿಯ ಬಗ್ಗೆ ಮಾಹಿತಿಯನ್ನು ಜಿಲ್ಲಾ ಶುಶ್ರೂಷಣಾಧಿಕಾರಿ ಮಿಸ್ಸಿ ಇವರು ನೀಡಿದರು. ಮಳೆಗಾಲದಲ್ಲಿ ಬರಬಹುದಾದ ಡೆಂಗ್ಯೂ, ಚಿಕುನ್ ಗುನ್ಯ, ಮತ್ತು ಅತಿಸಾರಭೇದಿ ರೋಗಗಳ ಮುಂಜಾಗೃತೆಯ ಬಗ್ಗೆ ಆಶಾ ಕಾರ್‍ಯಕರ್ತೆಯರಿಗೆ ಮನೆಭೇಟಿ ಸಂದರ್ಭದಲ್ಲಿ ತಿಳಿ ಹೇಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷರಾದ ಎಂ.ಸುಧೀರ್ ಕುಮಾರ್ ಶೆಟ್ಟಿ ಮಿತ್ತೂರು, ಸದಸ್ಯರುಗಳಾದ ಜಯರಾಮ ಕಾರ್‍ಯಾಡಿಗುತ್ತು, ಚಿದಾನಂದ ಪೆಲತ್ತಿಂಜ, ಸತೀಶ್ ಕೆಂರ್ದೆಲು, ಕೇಶವ ಉರಿಮಜಲು, ರಮೇಶ ಪೂಜಾರಿ ಸೂರ್‍ಯ , ಜನಾರ್ದನ ಕಂ, ಕರುಣಾಕರ ಅಡ್ಯಾಲು, ವಸಂತಿ ಒಡ್ಯರ್ಪೆ, ಜಗದೀಶ್ವರಿ ಕುವೆತ್ತಿಲ, ಬೇಬಿ ಸೂರ್ಯ, ಪ್ರೇಮಾ ಅರ್ಕೆಚ್ಚಾರು, ರಸಿಕಾ ಕಂಬಳದಡ್ಡ, ರತ್ನ ಸೇಕೆಹಿತ್ಲು, ಶಾರದಾ ಅಡ್ಯಾಲು ಭಾಗವಹಿಸಿದ್ದರು.
ಪಿಡಿಒ ಗೋಕುಲ್‌ದಾಸ್ ಭಕ್ತ ಸ್ವಾಗತಿಸಿದರು. ಕಾರ್‍ಯದರ್ಶಿ ಎ.ಬಿ.ಅಜಿತ್ ಕುಮಾರ್ ವಂದಿಸಿದರು. ಪಂಚಾಯಿತಿ ಸಿಬ್ಬಂದಿ ವರ್ಗ ಸಹಕರಿಸಿದರು.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...