Thursday, January 29, 2026

ಇಡ್ಕಿದು: ಹೈಮಾಸ್ಟ್ ದೀಪ ಉದ್ಘಾಟನೆ

ವಿಟ್ಲ: ಕುಳ ಗ್ರಾಮದ ಕುಂಡಡ್ಕ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ಅಭಿವೃದ್ದಿ ಯೋಜನೆಯಡಿ ಅನುಷ್ಠಾನಗೊಂಡಿರುವ ಹೈಮಾಸ್ಟ್ ದೀಪವನ್ನು ಪುಣಚ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾದ ಜಯಶ್ರೀ ಕೋಡಂದೂರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಚಂದ್ರಾವತಿ, ಉಪಾಧ್ಯಕ್ಷರಾದ ಎಂ. ಸುಧೀರ್ ಕುಮಾರ್ ಶೆಟ್ಟಿ , ಪಿಡಿಒ ಗೋಕುಲ್‌ದಾಸ್ ಭಕ್ತ, ಪಂಚಾಯಿತಿ ಸದಸ್ಯರಾದ, ಚಿದಾನಂದ ಪೆಲತ್ತಿಂಜ, ಜಯರಾಮ ಕಾರ್‍ಯಾಡಿಗುತ್ತು, ಶಾರದಾ, ಕರ್ಗಲ್ಲು ನೂಜಿ ಮನೆತನದ ಕೆ.ಟಿ.ವೆಂಕಟೇಶ್ವರ ನೂಜಿ, ಮಾಜಿ ಪಂ.ಅಧ್ಯಕ್ಷರಾದ ಸುಂದರ ಗೌಡ ಪಾಂಡೇಲು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...