ಮಂಗಳೂರು : ಮೀನಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಇಂದು ಬೆಳಿಗ್ಗೆ ಮಂಗಳೂರಿನ ಪಂಪ್ ವೆಲ್ ಬಳಿ ವಶಕ್ಕೆ ಪಡೆದ ಘಟನೆ ನಡೆದ ಬಗ್ಗೆ ವರದಿಯಾಗಿದೆ.



ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಟ್ರಕ್ ನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದು, ವಾಹನದಲ್ಲಿದ್ದ ಸುಮಾರು 10 ಟನ್ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಇದೆ.












