Monday, January 26, 2026

ಫೆ. 7ರಂದು ಶ್ರೀ ದೇವಿ ಭಜನಾ ಮಂದಿರ (ರಿ) ಪುರಿಯ ಪುಂಜಾಲಕಟ್ಟೆ ಇದರ ನವೀಕೃತ ಭಜನಾ ಮಂದಿರ ಲೋಕಾರ್ಪಣೆ

ಫೆ. 7ರಂದು ಶ್ರೀ ದೇವಿ ಭಜನಾ ಮಂದಿರ (ರಿ) ಪುರಿಯ ಪುಂಜಾಲಕಟ್ಟೆ ಇದರ ನವೀಕೃತ ಭಜನಾ ಮಂದಿರ ಲೋಕಾರ್ಪಣೆ

ಶ್ರೀ ದೇವಿ ಭಜನಾ ಮಂದಿರ (ರಿ) ಪುರಿಯ ಪುಂಜಾಲಕಟ್ಟೆ ಇದರ ನವೀಕೃತ ಭಜನಾ ಮಂದಿರ ಲೋಕಾರ್ಪಣೆ, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು 36ನೇ ವರ್ಷದ ಭಜನಾ ಮಂಗಲೋತ್ಸವ ಫೆ.6ರಿಂದ 9 ಹಾಗೂ 12ರವರಗೆ ನಡೆಯಲಿದೆ.

ಫೆ. 7ರಂದು ಕುಕ್ಕೆ ಸುಬ್ರಮಣ್ಯ, ಶ್ರೀ ಸಂಪುಟ ನರಸಿಂಹ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರಿಂದ ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಆಶೀರ್ವನ ಕಾರ್ಯಕ್ರಮ ನಡೆಯಲಿದೆ. ಬಳಿಕ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರೆಂಕಿ , ಮಡಂತ್ಯಾರು ಇವರಿಂದ ಶ್ರೀ ಶನ್ವೀಶ್ವರ ಮಹಾತ್ಮೆ ತುಳು ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.

ಫೆ. 8 ರಂದು ವಿವಿಧ ಭಜನಾ ಮಂಡಳಿಯವರಿಂದ ಉದಯಾಸ್ತಮಾನ ಭಜನಾ ಸಂಕೀರ್ತನೆ, ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸ್ಥಳೀಯ ಪ್ರತಿಭೆಗಳಿಂದ ಭಕ್ತಿ-ಭಾವ-ಜನಪದ-ನೃತ್ಯ ವೈಭವ ನಡೆಯಲಿದೆ.

ಪೆ.9 ರಂದು ಬೆಳಿಗ್ಗೆ ಲೋಕ ಕಲ್ಯಾಣಾರ್ಥ ಚಂಡಿಕಾ ಹೋಮ, ಸಂಜೆ 5. 30 ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.

ಇನ್ನು ಪೆ. 12 ರಂದು ಸಭಾ ಕಾರ್ಯಕ್ರಮ , ರಾತ್ರೀ 7.30ರಿಂದ ಕಲ್ಲುರ್ಟಿ ಪಂಜುರ್ಲಿ ದೈವಗಳಿಗೆ ನೇಮೋತ್ಸವ ನಡೆಯಲಿದೆ.

More from the blog

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...

ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು – ವಜ್ರದೇಹಿ ಶ್ರೀ

ವಿಟ್ಲ: ಹಿಂದು ಸಮಾಜ ಪ್ರಸಕ್ತ ಪರಿಸ್ಥಿತಿಯಲ್ಲೂ ಎಚ್ಚೆತ್ತುಕೊಳ್ಳದಿದ್ದರೆ ಹಿಂದುಗಳು ಗಂಡಾಂತರ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಜಾತಿ ಸಮುದಾಯಗಳು ಒಟ್ಟಾಗಿ ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು. ಹೀಗಾದಾಗ ಮಾತ್ರ ರಾಜಕೀಯ ಷಡ್ಯಂತ್ರಗಳನ್ನು ಮೆಟ್ಟಿ ಮುನ್ನಡೆಯ...