ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಲ್ಯ ಎಂಬಲ್ಲಿ 7.25 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ಹಾಗೂ ಇಂಟರ್ ಲಾಕ್ ರಸ್ತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.
ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ್ ಎಂ ವಿಟ್ಲ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಮುಖ್ಯಾಧಿಕಾರಿ ಮಾಲಿನಿ, ಸದಸ್ಯರಾದ ರಾಮ್ದಾಸ್ ಶೆಣೈ, ಲೋಕನಾಥ ಶೆಟ್ಟಿ ಕೊಲ್ಯ, ಉಷಾ ಕೃಷ್ಣಪ್ಪ, ಮಂಜುನಾಥ ಕಲ್ಲಕಟ್ಟ, ಶ್ರೀಕೃಷ್ಣ, ಬಿಜೆಪಿ ನಗರ ಅಧ್ಯಕ್ಷ ಮೋಹನದಾಸ ಉಕ್ಕುಡ, ನಾಮನಿರ್ದೇಶಿತ ಸದಸ್ಯೆ ಭವಾನಿ ರೈ ಕೊಲ್ಯ ಇದ್ದರು.
