Wednesday, January 28, 2026

ಇರಾ :- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಂಗಳೂರು ವತಿಯಿಂದ ಜಲಜೀವನ್ ಮಿಷನ್ (ಮನೆ ಮನೆಗೆ ಗಂಗೆ ) ‌

ಬಂಟ್ವಾಳ : ‌ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಮಂಗಳೂರು ಕುಡಿಯುವ ನೀರು ನೈರ್ಮಲ್ಯ ಇಲಾಖೆ ಹಾಗೂ ಸಮುದಾಯ ಸಂಸ್ಥೆ (ರಿ) ತುಮಕೂರು ಇವರ ಸಹಯೋಗದೊಂದಿಗೆ, ಜಲಜೀವನ್ ಮಿಷನ್ ( ಮನ ಮನೆಗೆ ಗಂಗೆ) ಮತ್ತು ಸ್ಚಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿ ಗ್ರಾಮ ಕ್ರಿಯಾ ಯೋಜನೆ ಕಾರ್ಯಕ್ರಮವು ಇರಾ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ನಡೆಯಿತು.

ಜಲಜೀವನ್ ಮಿಷನ್ ನ ಚರಣ್ ರಾಜ್ ರವರು ಶುದ್ಧ ನೀರಿನ ಉಪಯುಕ್ತತೆ ಹಾಗೂ ಕಲುಶಿತ ನೀರಿನಿಂದ ಉಂಟಾಗುವ ಆರೋಗ್ಯ ತೊಂದರೆಗಳನ್ನು ತಿಳಿಸಿದರು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭೆಯಲ್ಲಿ ಆಡಳಿತ ಅಧಿಕಾರಿ ಕೃಷ್ಣಮೂರ್ತಿ ಜಿ, ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಪಂಚಾಯತ್ ಹಾಲಿ ಹಾಗೂ ಮಾಜಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಪು ಚಾಲಕರು,ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಸುಶೀಲ ಸ್ವಾಗತಿಸಿ, ಕಾರ್ಯದರ್ಶಿ ನಳಿನಿ ಎ.ಕೆ ಧನ್ಯವಾದ ಸಲ್ಲಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...